ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆಯ ಪ್ರಸ್ತಾಪವೇ ಇಲ್ಲದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವುದಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ತನ್ನ ರಾಜಕೀಯ ವಿರೋಧಿಗಳ ಮೇಲೆ ಕಿರುಕುಳ ನೀಡಲು ಮತ್ತು ಸೇಡು ತೀರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸ ಜಾರಿ ನಿರ್ದೇಶನಾಲಯನ್ನು ಸಾಧನವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೇ 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಜನರು ಭಾರತೀಯ ಜನತಾ ಪಕ್ಷವನ್ನು ಹೀನಾಯವಾಗಿ ತಿರಸ್ಕರಿಸಿದರು. ಮತ್ತು ಆ ಅವಮಾನವನ್ನು ಮೋದಿ ಮರೆತಿಲ್ಲ. ಈಗ ಅದಕ್ಕೆ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಮೋದಿ ಹಾಗು ಜಾರಿ ನಿರ್ದೇಶನಾಲಯದ ಈ ಮುಖವಾಡ ಹೊರಗೆ ಬೀಳುತ್ತವೆ. ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕಳಂಕ ಹಚ್ಚುವ ಯತ್ನ ನಡೆದಿದೆ. ನಾವು ಇದಕ್ಕೆಲ್ಲ ಭಯಪಡುವುದಿಲ್ಲ ಎಂದು ಅವರು ಹೇಳಿದ್ದಾರೆ.