Monday, November 24, 2025

ಜಲಜೀವನ್ ಮಿಷನ್ ಯೋಜನೆ: ಕೇಂದ್ರದಿಂದ ನೆರವು ತರಲು ಬಿಜೆಪಿ ಮುಖಂಡರು ಸರ್ಕಾರದ ಜತೆ ಕೈಜೋಡಿಸಲಿ: ಪ್ರಿಯಾಂಕ್‌ ಖರ್ಗೆ ಆಗ್ರಹ

Most read

ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ. ಬಿಜೆಪಿ ಪಕ್ಷದವರಿಗೆ ನಿಜಕ್ಕೂ ರಾಜ್ಯದ ಪರವಾಗಿ ಕಾಳಜಿ ಇದ್ದರೆ ರಾಜ್ಯ ಸರ್ಕಾರದ ಒತ್ತಾಯಕ್ಕೆ ದನಿಗೂಡಿಸಿ ಜಲಜೀವನ್ ಮಿಷನ್ ಯೋಜನೆಗೆ ಹಣ ತರಲು ಕೈ ಜೋಡಿಸಲಿ. ಆ ಮೂಲಕ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು JJM ಯೋಜನೆಗಾಗಿ ರಾಜ್ಯ ಸರ್ಕಾರ ಖರ್ಚು ಮಾಡಿದ್ದೆಷ್ಟು ಮತ್ತು ಕೇಂದ್ರ ಸರ್ಕಾರ ನೀಡಿದ್ದೆಷ್ಟು ಎಂದು ಅಂಕಿಅಂಶ ಒದಗಿಸಿದ್ದಾರೆ. ಆ ಮೂಲಕ ಕೇಂದ್ರ ಸ್ಕಾರದ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದಾರೆ.

– ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ.

– ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ.

– ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ.

– ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ

ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿತ್ತು ಆದರೆ ಬಿಡುಗಡೆಯಾದ ಮೊತ್ತ ಕೇವಲ ₹570,66 ಕೋಟಿ ಮಾತ್ರ.

ಯೋಜನೆಯ ಜಾರಿಗಾಗಿ ರಾಜ್ಯ ಸರ್ಕಾರವೇ ಆಸಕ್ತಿವಹಿಸಿ ಹಣ ಖರ್ಚು ಮಾಡಿದೆ, ಆದರೆ ಕೇಂದ್ರ ಸರ್ಕಾರದ ಅನ್ಯಾಯ ಮಾತ್ರ ಮುಂದುವರೆದೇ ಇದೆ.

ಈ ಹಿಂದೆಯೂ JJM ಯೋಜನೆಯ ಬಾಕಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ @siddaramaiah ಅವರು ಒತ್ತಾಯಿಸಿದ್ದರು, ಈಗಲೂ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ ಇಂತಹ ಅನ್ಯಾಯಗಳಿಂದ, ನಿರ್ಲಕ್ಷ್ಯದಿಂದ, ಕರ್ನಾಟಕದೆಡೆಗಿನ ದ್ವೇಷದಿಂದ ರಾಜ್ಯದ ಆರ್ಥಿಕ ಪ್ರಗತಿಗೆ ಪೆಟ್ಟು ಬೀಳುತ್ತಿದ್ದರೂ ರಾಜ್ಯದ ಯಾವೊಬ್ಬ ಬಿಜೆಪಿ ನಾಯಕರು ಕರ್ನಾಟಕದ ಪರವಾಗಿ ಧ್ವನಿ ಎತ್ತುವ, ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡದಿರುವುದು ಬಿಜೆಪಿಯ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ.

@BJP4Karnataka ಪಕ್ಷದವರಿಗೆ ನಿಜಕ್ಕೂ ರಾಜ್ಯದ ಪರವಾಗಿ ಕಾಳಜಿ ಇದ್ದರೆ ಸರ್ಕಾರದ ಒತ್ತಾಯಕ್ಕೆ ದನಿಗೂಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಸವಾಲು ಹಾಕಿದ್ದಾರೆ.

More articles

Latest article