ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಚುನಾವಣಾ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ.
ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದೆ. ಈಗ ಸದ್ಯದ ಫಲಿತಾಂಶ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ ಹಾಗೂ NC ಮೈತ್ರಿ ಪಕ್ಷಗಳು ಬಹುಮತ ಲೈನ್ ದಾಟಿ ಮುನ್ನಡೆ ಸಾಧಿಸಿದೆ. ಬಿಜೆಪಿಗೆ ತೀರ್ವ ಹಿನ್ನಡೆಯಾಗಿದೆ.
ಜಮ್ಮು ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ, ಆರ್ಟಿಕಲ್ 370 ರದ್ದಾದ ಬಳಿಕ ಮೊದಲ ವಿಧಾನಸಭಾ ಚುನಾವಣೆ ನಡೆದಿದ್ದು, ಗೆಲ್ಲೋದು ಯಾರು? ಎಂಬುದರ ಕುರಿತು ಕುತೂಹಲಗಳು ಮೂಡಿವೆ.