ನಾನು ಯಾವ ಪಕ್ಷದಲ್ಲೂ ಇಲ್ಲ; ಲೋಕಸಭಾ ಸ್ಪರ್ಧೆ ಬಗ್ಗೆ ವಾರದೊಳಗೆ ತೀರ್ಮಾನ: ಜಯಪ್ರಕಾಶ್ ಹೆಗ್ಡೆ

ನಾನೀಗ ಯಾವ ಪಕ್ಷದಲ್ಲೂ ಇಲ್ಲ. ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವುದನ್ನು ಸ್ನೇಹಿತರು, ಕುಟುಂಬಿಕರ ಜತೆ ಚರ್ಚಿಸಿ ಗ್ರೀನ್ ಸಿಗ್ನಲ್ ಸಿಕ್ಕರೆ ಯಾವ ಪಕ್ಷದಿಂದ ಸ್ಪರ್ಧೆ ಎನ್ನುವ ತೀರ್ಮಾನ ವಾರದೊಳಗೆ ಕೈಗೊಳ್ಳುವೆ ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮಗಿರಿಯ ಪ್ರೆಸ್ ಕ್ಲಬ್‍ನಲ್ಲಿ ಸೋಮವಾರ ಮಾಧ್ಯಮ ಸಂಚಾರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಪ್ರಶ್ನೆಗೆ, ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳೊಂದಿಗೆ ಚರ್ಚೆಯಲ್ಲಿದ್ದು ಲೋಕಸಭೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ವಾರದೊಳಗೆ ತೀರ್ಮಾನ ಕೈಗೊಳ್ಳುವುದಾಗಿ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಎರಡು ಪಕ್ಷಗಳ ಜೊತೆಗೂ ಚರ್ಚೆಯಲ್ಲಿದ್ದೇನೆ. ಚುನಾವಣೆಯಲ್ಲಿ ಈ ಹಿಂದೆ ಸೋತಿದ್ದರೂ ಚಲಾವಣೆಯಲ್ಲಿದ್ದೇನೆ. ಸಕ್ರಿಯ ರಾಜಕಾರಣದ ಬಗ್ಗೆ ತೀರ್ಮಾನವಾಗಿಲ್ಲ, ಗೊಂದಲದಲ್ಲಿದ್ದೇನೆ. ಲೋಕಸಭಾ ಚುನಾವಣೆಗೆ ನಿಲ್ಲದೇ ಇದ್ದರೂ ನನಗೆ ತೊಂದರೆಯಿಲ್ಲ, ಮಾನಸಿಕ ನೆಮ್ಮದಿ ಇರುತ್ತದೆ ಎಂದು ಹೇಳಿದರು.

More articles

Latest article

Most read