ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸುವುದು ಪಕ್ಕ ಎಂಬ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಬೆಂಗಳೂರು ಗ್ರಾಮಾಂತರದಲ್ಲಿ ದೇವೇಗೌಡರ ಅಳಿಯ ಸಿಎನ್ ಮಂಜುನಾಥ್ ಬಿಜೆಪಿಯ ಕಮಲ ಚಿಹ್ನೆಯಿಂದ ಸ್ಪರ್ಧಿಸಲಿದ್ದಾರೆ.
ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಜೆಡಿಎಸ್ ನಾಯಕರು ಕೆಲವು ಆಕ್ಷೇಪಣೆಗಳನ್ನು ಹೊರಹಾಕಿದ ಬೆನ್ನಲ್ಲೇ ಮೂರು ಕ್ಷೇತ್ರಗಳನ್ನು ಬಿಟ್ಟುಕೊಡುವ ತೀರ್ಮಾನಕ್ಕೆ ಬಿಜೆಪಿ ಬಂದಿದೆ ಎಂದು ತಿಳಿದುಬಂದಿದೆ.
ಮುಂಬರುವ ಚುನಾವಣೆಯ ಯೋಜನೆಯಲ್ಲಿ ಬಿಜೆಪಿ ನಾಯಕರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ನಾಯಕರು ತಮ್ಮನ್ನು ಯಾವುದೇ ಸಭೆಗೆ ಕರೆಯುತ್ತಿಲ್ಲ ಮತ್ತು ಇದು ಪಕ್ಷಕ್ಕೆ ಹಾನಿಕರ. ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ ಜೆಡಿಎಸ್ ಮೂರು ಕ್ಚೇತ್ರವನ್ನು ಬಿಟ್ಟುಕೊಟ್ಟರೆ ನಾವು ಅಭ್ಯರ್ಥಿಗಳನ್ನು ಘೋಷಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದರು. ಇದಾದ ಬೆನ್ನಲ್ಲೇ ಕೇಂದ್ರ ಬಿಜೆಪಿ ಜೆಡಿಎಸ್ ಗೆ ಮೂರು ಸ್ಥಾನವನ್ನು ಬಿಟ್ಟುಕೊಡುವ ತೀರ್ಮಾನ ಮಾಡಿದೆ.
ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಮಾತುಕತೆಯಿಂದಾಗಿ ಕೋಲಾರ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಿದೆ. ಕಳೆದ ಬಾರಿ ಗೆದ್ದಿದ್ದರಿಂದ ಬಿಜೆಪಿ ತನ್ನ ಹಿಡಿತ ಸಾಧಿಸಲು ಬಯಸಿತ್ತು, ಆದರೆ ಜೆಡಿಎಸ್ ಎರಡು ಸ್ಥಾನಕ್ಕೆ ನಾವು ಇಷ್ಟೇಲ್ಲ ಮಾಡಬೇಕಿತ್ತೇ ಮೈತ್ರಿಯಾಗಬೇಕಿತ್ತೆ ಎಂಬ ಅಸಮಾಧಾನದಿಂದಾಗಿ ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ.
ಮಂಡ್ಯ ಹಾಲಿ ಸಂಸದೆ ಸುಮಲತಾ ಈ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ವಿಶ್ವಾಸ ಹೊಂದಿದ್ದರು. ಆದರೆ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿಯಿಂದಾಗಿ ಬಿಜೆಪಿ ಬೆಂಬಲಿತ ಹಾಲಿ ಸಂಸದೆ ಸುಮಲತಾಗೆ ಟಿಕೆಟ್ ಕೈತಪ್ಪಿದೆ. ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡಲು ಸೂಚಿಸಿದರೂ ಆಶ್ಚಿರ್ಯಪಡಬೇಕಿಲ್ಲ.
2019 ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದನ್ನು ಗೆದ್ದಿದ್ದವು. ಪಕ್ಷೇತರವಾಗಿ ಗೆದ್ದ ಸುಮಲತ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು.
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈಗ ಲೋಕಸಭಾ ಚುನಾವಣೆ ಬಂದಿದ್ದು ಸುಮಾರು 17ಕ್ಕೂ ಹೆಚ್ಚು ಕ್ಷೇತ್ರವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.
ಪ್ರದೇಶಿಕ ಪಕ್ಷಯೊಂದು ಎರಡು ಕ್ಷೇತ್ರಗಳಲ್ಲಿ ಸ್ಪರ್ಥಿಸಲು ಮೈತ್ರಿ ಅವಶ್ಯಕತೆ ಇತ್ತೆ. ಇದು ಜೆಡಿಎಸ್ ಮುಜುಗರ ತರಯವಂತಹ ವಿಷಯ ಎಂದು ಡಿಕೆ ಶಿವಕುಮಾರ್ ಟೀಕಿಸಿದ್ದರು.