ಎನ್ ಡಿಎ 38 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಜೆಎಂಎಂ 32 ರಲ್ಲಿ ಮುನ್ನೆಡೆ
ಜಾರ್ಖಂಡ್‌ನಲ್ಲಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಹವಣಿಸುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯವನ್ನು ತಮ್ಮ ವಶಕ್ಕೆ ಪಡೆಯುವ ನಿರೀಕ್ಷೆಯಲ್ಲಿದೆ.
ಜಾರ್ಖಂಡ್ ವಿಧಾನಸಭೆಯ ಒಟ್ಟು 81 ಸ್ಥಾನಗಳಿಗೆ 528 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆಡಳಿತರೂಢ ಇಂಡಿಯಾ ಮೈತ್ರಿಕೂಟದಿಂದ ಜೆಎಂಎಂ 43, ಕಾಂಗ್ರೆಸ್ 30, ಆರ್‌ಜೆಡಿ 6 ಮತ್ತು ಸಿಪಿಐ(ಎಂಎಲ್) 4 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಎನ್‌ಡಿಎ ಮೈತ್ರಿಕೂಟದಿಂದ ಬಿಜೆಪಿ 68, ಮಿತ್ರಪಕ್ಷಗಳಾದ ಎಜೆಎಸ್‌ಯು 10, ಜೆಡಿಯು 2 ಮತ್ತು ಲೋಕ ಜನಶಕ್ತಿ (ರಾಮ್ ವಿಲಾಸ್) ಒಂದರಲ್ಲಿ ಸ್ಪರ್ಧೆ ಮಾಡಿದೆ.