ತುಮಕೂರಿನಲ್ಲಿ ಟೈಮ್ಸ್ ಆಫ್ ಇಂಡಿಯಾ ವರದಿಗಾರರಾಗಿದ್ದ ಎಸ್.ಭುವನೇಶ್ವರಿ (47)ಅವರು ಇಂದು ಬೆಳಿಗ್ಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಾಸನದವರಾದ ಭುವನೇಶ್ವರಿ,
ಹಿಂದೂ ಪತ್ರಿಕೆಯ ವರದಿಗಾರರಾಗಿಯೂ ತುಮಕೂರಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು.
ಪತಿ, ಪುತ್ರ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಕೆಯುಡಬ್ಲ್ಯುಜೆ ಸಂತಾಪ:
ಹಿರಿಯ ಪತ್ರಕರ್ತೆ ಭುವನೇಶ್ವರಿ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕೆಯುಡಬ್ಲ್ಯುಜೆ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳುತ್ತಿದ್ದ ಅವರು, ಕ್ರಿಯಾಶೀಲ ವರದಿಗಾರರಾಗಿದ್ದರು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.