ಉಪರಾಷ್ಟ್ರಪತಿ ಹುದ್ದೆಗೆ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ; ಖರ್ಗೆ ಘೋಷಣೆ

Most read

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.

ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಇಂಡಿಯಾ ಒಕ್ಕೂಟದ ಪಕ್ಷಗಳ ಪ್ರಮುಖರ ಸಭೆಯಲ್ಲಿ ಸುದರ್ಶನ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ. ಜಗದೀಪ್‌ ಧನಕರ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.

ಆಂಧ್ರಪ್ರದೇಶ ಮೂಲದ ಸುದರ್ಶನ ರೆಡ್ಡಿ ಅವರು ಈ ತಿಂಗಳ 21 ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಇವರು ಆಧ್ರಪ್ರದೇಶ ಹೈಕೋರ್ಟ್‌ ನ್ಯಾಯಮೂರ್ತಿ, ಗೌಹಾತಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು 2007ರಿಂದ 2011ರವರೆಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ.

More articles

Latest article