ಕ್ಷಮೆ ಕೇಳದ ಕಮಲ್‌ ಹಾಸನ್‌; ರಾಜ್ಯದಲ್ಲಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಇಲ್ಲ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ಗೆ ಸಂಕಷ್ಟ ತಪ್ಪಿಲ್ಲ. ಅವರು ತಮ್ಮ ಮಾತಿಗೆ ಕ್ಷಮೆ ಕೇಳಿಲ್ಲವಾದ್ದರಿಂದ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಯೂ ಮುಂದಕ್ಕೆ ಹೋಗಿದೆ. ಸಿನಿಮಾ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ಕಮಲ್‌ ಹಾಸನ್‌ ರಾಜ್ಯ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಬೀಟಿಂಗ್ ಅರೌಂಡ್ ಬುಷ್ ಬೇಡ ಎಂದು ತರಾಟೆಗೆ ತೆಗೆದುಕೊಂಡರು. ನಂತರ ಅವರು ಚಲನಚಿತ್ರ ವಾಣಿಜ್ಯ ಮಂಡಳಿ ಜತೆ ಚರ್ಚಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದರು.

ಕನ್ನಡ ಭಾಷೆ ಬಗ್ಗೆ ಕಮಲ್ ಹಾಸನ್ ವಿವಾದ. ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಹೇಳಿಕೆಯಲ್ಲಿ ಕಮಲ್‌ ಹಾಸನ್‌ ಪರ ವಕೀಲರು ವಾದಿಸಿ ಕಮಲ್‌ ಅವರಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಕನ್ನಡದ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರಿಗೆ ಕನ್ನಡದ ಬಗ್ಗೆ ಪ್ರೀತಿ, ಅಭಿಮಾನ ಇದೆ ಎಂದು ಹೇಳಿದರು. ನಂತರ ಕಮಲ್‌ ಹಾಸನ್‌ ಒಡೆತನದ ರಾಜ್ ಕಮಲ್ ಸಂಸ್ಥೆ ಪರ ವಕೀಲರು ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ ಹೈಕೋರ್ಟ್ ಗೆ ಸ್ಪಷ್ಟನೆ ನೀಡಿದರು.

More articles

Latest article

Most read