ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಪ್ರದರ್ಶನಕ್ಕೆ ನಿರ್ಬಂಧ ಹೇರಿಲ್ಲ: ಸುಪ್ರೀಂಕೋರ್ಟ್‌ ಗೆ ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು:ಚಿತ್ರನಟ ಕಮಲ್ ಹಾಸನ್ ನಟಿಸಿರುವ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಚುರುಕು ಮುಟ್ಟಿಸಿತ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಘನ ನ್ಯಾಯಾಲಯದ ಆದೇಶದ ಪ್ರಕಾರ ಪ್ರತಿಕ್ರಿಯೆ ಸಲ್ಲಿಸಲಾಗುತ್ತಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (ಸಿಬಿಎಫ್‌ ಸಿ) ಪ್ರಮಾಣೀಕರಿಸಲ್ಪಟ್ಟ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆಗೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದರೆ, ಸರ್ಕಾರ ತನ್ನ ಕರ್ತವ್ಯ  ನಿರ್ವಹಿಸಲಿದೆ. ಸಿನಿಮಾಗೆ ಸಂಬಂಧಿಸಿದವರಾದ  ನಟರು, ನಿರ್ದೇಶಕರು, ನಿರ್ಮಾಪಕರು, ವಿತರಕರು ಹಾಗೂ ಪ್ರೇಕ್ಷಕರಿಗೆ ಸೂಕ್ತ ಭದ್ರತೆ ಒದಗಿಸುತ್ತದೆ ಎಂದು ಸ್ಪಷ್ಟಪಡಿಸಿದೆ.

ಸಿನಿಮಾದ ನಾಯಕ ನಟ ಪ್ರಚಾರ ಕಾರ್ಯಕ್ರಮದ ವೇಳೆ ನೀಡಿರುವ ಕೆಲವು ಹೇಳಿಕೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು, 2025ರ ಮೇ 30ರಂದು ಪತ್ರ ಬರೆದು ಕ್ಷಮೆಯಾಚಿಸುವಂತೆ ಕಮಲ್‌ ಹಾಸಮ್‌ ಅವರನ್ನು ಕೋರಿದೆ ಎಂದೂ ಹೇಳಿಕೆಯಲ್ಲಿ  ತಿಳಿಸಿದೆ.

ಈ  ಸಿನಿಮಾ ನಿರ್ಮಾಣ ಮಾಡಿರುವ ರಾಜ್‌ ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌, ‘ಥಗ್‌ ಲೈಫ್‌’ ಚಿತ್ರ ಬಿಡುಗಡೆಗೆ ಸೂಕ್ತ ಭದ್ರತೆ ಒದಗಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿತ್ತು. ಈ ವಿಚಾರವಾಗಿ ಜೂನ್‌ 3ರಂದು ನಡೆದ ವಿಚಾರಣೆ ಸಂದರ್ಭದಲ್ಲಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆಗಿನ ವಿವಾದ ಬಗೆಹರಿಯುವವರೆಗೆ ರಾಜ್ಯದಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಹೈಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದೂ ಸ್ಪಷ್ಟನೆಯಲ್ಲಿ ತಿಳಿಸಿದೆ.

ಜೂನ್ 17ರಂದು ಸಿನಿಮಾಆ ಬಿಡುಗಡೆ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ಚಿತ್ರಮಂದಿರಗಳಲ್ಲಿ ‘ಥಗ್‌ ಲೈಫ್‌’ ಸಿನಿಮಾ ಪ್ರದರ್ಶನಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಹೊಣೆ ಎಂದು ಹೇಳಿತ್ತು. ಯಾರಾದರೂ ಏನಾದರೂ ಮೌಖಿಕ ಹೇಳಿಕೆ ನೀಡಿದ್ದರೆ, ಅದಕ್ಕೆ ಹೇಳಿಕೆಯಿಂದಲೇ ಪ್ರತ್ಯುತ್ತರ ನೀಡಿ. ಯಾರಾದರೂ ಏನಾದರೂ ಬರೆದಿದ್ದರೆ, ಬರಹ ರೂಪದಲ್ಲೇ ಅದಕ್ಕೆ ಪ್ರತ್ಯುತ್ತರ ನೀಡಿ. ಆದರೆ, ಹೀಗೆ ನಿಷೇಧದ ಸನ್ನಿವೇಶ ಸೃಷ್ಟಿಸಲು ಕಾನೂನಿನಲ್ಲಿಅವಕಾಶ ಇಲ್ಲ ಎಂದು ಹೇಳಿತ್ತು.

More articles

Latest article

Most read