ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; ಐವರ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

Most read

ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ  ಪರಿಣಾಮ ಐವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಬರುವ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸರಕು ಸಾಗಣೆ ರೈಲು ಡಿಕ್ಕಿ ಹೊಡೆದ ಕಾರಣ, ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿ ಬಿದ್ದಿವೆ. ಪರಿಣಾಮ 5 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾಗಿ ವರದಿ ಹೇಳಿದೆ.

“ಪ್ರಾಥಮಿಕ ತನಿಖೆಯ ಪ್ರಕಾರ ಗೂಡ್ಸ್ ರೈಲು ಚಾಲಕ ಸಿಗ್ನಲ್ ಅನ್ನು ಗಮನಿಸದೇ ರೈಲನ್ನು ಓಡಿಸಿದ ಕಾರಣ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ” ಎಂದು ಮತ್ತೊಬ್ಬ ಉನ್ನತ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

More articles

Latest article