Saturday, July 27, 2024

ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಕೆ ಅವಧಿ ವಿಸ್ತರಣೆ; ಡಿಸಿಎಂ ಮಾಹಿತಿ

Most read

ನಾಮಫಲಕಗಳಲ್ಲಿ (Kannada Name Board) ಶೇಕಡಾ 60 ಕನ್ನಡ ಭಾಷೆ (Kannada Language) ಅಳವಡಿಕೆ ನೀಡಲಾಗಿದ್ದ ಅವಧಿ ಇಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ ಇದೇ ವೇಳೆ ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲ ಅವಧಿಯನ್ನು ವಿಸ್ತರಣೆ ಮಾಡಿ ಅವಕಾಶ ನೀಡಲಾಗಿದೆ.

ಈ ಕುರಿತಂತೆ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ (Bengaluru Development) ಸಚಿವ ಡಿಕೆ ಶಿವಕುಮಾರ್ (DK Shivakumar) ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇಕಡಾ 60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ. ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆಬ್ರವರಿ 28ರ ಒಳಗೆ 55 ಸಾವಿರಕ್ಕೂ ಹೆಚ್ಚು ಮಳಿಗೆಗಳಿಗೆ ಕನ್ನಡ ನಾಮಫಲಕ ಅಳವಡಿಸಿಕೊಳ್ಳಲು ನೋಟಿಸ್ ಜಾರಿ ಮಾಡಲಾಗಿತ್ತು. ಇದರಲ್ಲಿ 52 ಸಾವಿರದಷ್ಟು ಉದ್ದಿಮೆಗಳು ನಿಯಮದಂತೆ ಕನ್ನಡ ಬಳಿಕೆ ಮಾಡಿ ನಾಮಫಲಕ ಅಳವಡಿಸಿಕೊಂಡಿವೆಯಂತೆ. 

More articles

Latest article