ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ‘ಶಾಸಕ ವಿಜಯಾನಂದ ಕಾಶಪ್ಪನವರ್’ ನೇಮಕ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ವಿಜಯಾನಂದ ಕಾಶಪ್ಪವನವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು, ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತ ಕಾಶಪ್ಪನವರ್ ವಿಜಯಾನಂದ ಶಿವಶಂಕರಪ್ಪ ಅವರನ್ನು ಕರ್ನಾಟಕ ಕ್ರೀಢಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ದಿನಾಂಕ 26-01-2024ರಂದು ನೇಮಿಸಲಾಗಿತ್ತು. ಈ ಆದೇಶವನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ.

ಶಾಸಕರಾದಂತ ವಿಜಯಾನಂದ ಕಾಶಪ್ಪನವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಲ್ಲದೇ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ, ಆದೇಶ ಹೊರಡಿಸುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.

More articles

Latest article

Most read