ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಸಹಿ ಹಾಕದಿರಲು ಕಾರಣವೇನು ಎಂಬುದು ತಿಳಿದುವಂದಿಲ್ಲ. ಆದರೆ ಈ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿಮಲ್ಲಿ ಮಾತನಾಡಿರುವ ಅವರು, ಕನ್ನಡ ಭಾಷೆ ಭಾವಾನಾತ್ಮಕ ವಿಚಾರ. ನೀವು ಕರ್ನಾಟಕದಲ್ಲಿ ಇದ್ದೀರಿ, ನಮ್ಮ ರಾಜ್ಯಪಾಲರಾಗಿದ್ದೀರಿ. ಇಂತಹ ನೀತಿಯಲ್ಲಿ ತಪ್ಪು ಕಂಡು ಹಿಡಿಯಬಾರದು. ನಾಗರಿಕರು, ಇತರೇ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳಿವೆ ಎಂದು ನಿಮ್ಮ ಗಮನಕ್ಕೆ ತಂದಿದ್ದಾರೆಯೇ? ಯಾರೂ ಆಕ್ಷೇಪ ಸಲ್ಲಿಸಿಲ್ಲ ಎಂದಮೇಲೆ ಸಹಿ ಹಾಕದೆ ಇರಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.
ರಾಜ್ಯಪಾಲರು ವಿಧಾನಸಭೆ ಅಧಿವೇಶನ ನಡೆಯುವ ತನಕ ಕಾಯಬಾರದಿತ್ತು. ಈಗಲೇ ಸಹಿ ಮಾಡಬಹುದಿತ್ತು. ಮತ್ತೊಮ್ಮೆ ಆದೇಶ ಪರಿಶೀಲಿಸುವಂತೆ ಸರ್ಕಾರದ ಪರವಾಗಿ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಯಾವುದೇ ಅನುಮಾನ ಬೇಡ. ನಾಮಫಲಗಳಲ್ಲಿ ಶೇ. 60 ಕನ್ನಡ ಇರಬೇಕು ಎನ್ನುವ ವಿಧೇಯಕವನ್ನು ವಿಧಾನಸಭೆ ಅಧಿವೇಶನಲ್ಲಿ ಮಂಡಿಸಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.
ನಾಮಫಲಕಗಳಲ್ಲಿ 60% ಕನ್ನಡವನ್ನು ಕಡ್ಡಾಯಗೊಳಿಸುವ ಸುಗ್ರೀವಾಜ್ಞೆಯನ್ನು ಗೌರವಾನ್ವಿತ ರಾಜ್ಯಪಾಲರು ತಿರಸ್ಕರಿಸಿಲ್ಲ. ಉಭಯ ಸದನಗಳ ಮುಂದೆ ಮಂಡಿಸುವಂತೆ ಸಲಹೆಯೊಂದಿಗೆ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ ಎಂದು ತಿಳಿದುಬಂದಿದೆ.