Wednesday, December 10, 2025

ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ‌ ಹೆಗಡೆ ಸೇರಿ ಐವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

Most read

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ 5 ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ವರ್ಷದ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಹಿರಿಯ ಸಾಹಿತಿಗಳಿಗೆ ಐವತ್ತು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿ ಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರದೊಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೆಯ ವರ್ಷದ ಗೌರವ ಪ್ರಶಸ್ತಿಯನ್ನು ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಶ್ರೀ ಎಲ್. ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 06-11-2024ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ.

2022ನೆಯ ವರ್ಷದ ಗೌರವ ಪ್ರಶಸ್ತಿ ಪುರಸ್ಕೃತರು

  1. ಆರ್. ಕೆ. ಹುಡಗಿ
  2. ಅಗ್ರಹಾರ ಕೃಷ್ಣಮೂರ್ತಿ
  3. ಇಂದಿರಾ ಹೆಗಡೆ
  4. ರಂಜಾನ್ ದರ್ಗಾ
  5. ತುಂಬಾಡಿ ರಾಮಯ್ಯ

More articles

Latest article