ಕೆಪಿಎಸ್‌ಸಿ ಹಗರಣದ ಸಮಗ್ರ ಸಿಬಿಐ ತನಿಖೆಗೆ ಕರವೇ ಆಗ್ರಹ

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೂ ನ್ಯಾಯ ದೊರೆಯಬೇಕು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ದಲ್ಲಿ ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಗಂಭೀರ ಆರೋಪಗಳು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸವನ್ನು ಬುಡಮೇಲು ಮಾಡಿವೆ. ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದ ಆರೋಪಗಳು ರಾಜ್ಯದ ಆಡಳಿತ ವ್ಯವಸ್ಥೆಯ ವಿಶ್ವಾಸಾರ್ಹತೆಯ ಮೇಲೆಯೇ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿವೆ. ಈ ಹಿನ್ನೆಲೆಯಲ್ಲಿ ಕೇವಲ ಇಲಾಖಾ ಅಥವಾ ಸೀಮಿತ ತನಿಖೆಯಿಂದ ಸತ್ಯ ಹೊರಬರುವುದಿಲ್ಲ. ಹೀಗಾಗಿ ಕೆಪಿಎಸ್‌ಸಿ ನೇಮಕಾತಿಗಳಲ್ಲಿನ ಎಲ್ಲ ಅಕ್ರಮಗಳ ಕುರಿತು ಕೇಂದ್ರ ತನಿಖಾ ದಳ ದಿಂದ ಸಮಗ್ರ ಮತ್ತು ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸುತ್ತದೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಹಾಕಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಆರೋಪಗಳ ಹಿನ್ನೆಲೆಯಲ್ಲಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿದೆ ಹಾಗೂ ಹೈಕೋರ್ಟ್‌ನಲ್ಲಿಯೂ ಸಿಬಿಐ ತನಿಖೆಗೆ ಸಂಬಂಧಿಸಿದ ಅರ್ಜಿಗಳು ವಿಚಾರಣೆಯಲ್ಲಿವೆ. ಆದರೆ ಇಷ್ಟು ಸಾಲದು. ಸರಿಯಾದ ತನಿಖೆ ನಡೆದು ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಕೆಪಿಎಸ್ ಸಿ ಮೂಲಕ ನಡೆಡೆದಿರುವ ವಿವಿಧ ನೇಮಕಾತಿ ಪ್ರಕ್ರಿಯೆಗಳು, ಪರೀಕ್ಷೆಗಳು, ಫಲಿತಾಂಶಗಳು ಮತ್ತು ಆಯ್ಕೆ ಪಟ್ಟಿಗಳ ಬಗ್ಗೆ ಸಾರ್ವಜನಿಕರಲ್ಲಿ ಗಂಭೀರ ಅನುಮಾನಗಳು ಮೂಡಿವೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಸೇರಿದಂತೆ ಹಲವು ನೇಮಕಾತಿಗಳಲ್ಲಿ ಹಣದ ವ್ಯವಹಾರ ನಡೆದಿದೆ, ಮಧ್ಯವರ್ತಿಗಳ ಮೂಲಕ ಉದ್ಯೋಗ ಮಾರಾಟವಾಗಿದೆ ಎಂಬ ಆರೋಪಗಳೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಸಮಗ್ರ ತನಿಖೆಯ ಮೂಲಕವೇ ಸತ್ಯಾಸತ್ಯತೆ ತಿಳಿಯಬೇಕು ಎಂದು ಹೇಳಿದ್ದಾರೆ.

ವಿಶೇಷವಾಗಿ, ಸಾಹುಕಾರ್ ಅವರ ಅಧ್ಯಕ್ಷತೆಯ ಅವಧಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಸಾವಿರಾರು ಅಭ್ಯರ್ಥಿಗಳಿಗೆ ತೀವ್ರ ಅನ್ಯಾಯವಾಗಿದೆ. ಹುದ್ದೆಗಳನ್ನು ಮಾರಿಕೊಂಡ ಹಿನ್ನಲೆಯಲ್ಲೇ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ದೊರಕಬೇಕಿದ್ದ ನ್ಯಾಯ ದೊರೆಯಲಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಸರ್ಕಾರ ಹಾಗೂ ಕೆಪಿಎಸ್‌ಸಿಯ ಗಮನ ಸೆಳೆದಿತ್ತು. ಆದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿಲ್ಲ. ಕನ್ನಡದಲ್ಲಿ ಶಿಕ್ಷಣ ಪಡೆದ ಪ್ರತಿಭಾವಂತ ಯುವಜನರ ಭವಿಷ್ಯವನ್ನು ಹಾಳು ಮಾಡಿದ ಎಲ್ಲ ನಿರ್ಧಾರಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಕೆಪಿಎಸ್‌ಸಿ ಎನ್ನುವುದು ಸಾಮಾನ್ಯ ಸಂಸ್ಥೆಯಲ್ಲ. ಇದು ರಾಜ್ಯದ ಆಡಳಿತ ವ್ಯವಸ್ಥೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವ ಸಾಂವಿಧಾನಿಕ ಸಂಸ್ಥೆ. ಅಂತಹ ಸಂಸ್ಥೆಯ ಮೇಲೆಯೇ ಜನರ ವಿಶ್ವಾಸ ಕುಸಿದರೆ ಅದು ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಗೆ ಅಪಾಯಕಾರಿ ಬೆಳವಣಿಗೆಯಾಗುತ್ತದೆ. ಆದ್ದರಿಂದ ಕೇವಲ ಕೆಲ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದರಿಂದ ಸಾಲದು. ಕಳೆದ ಹಲವು ವರ್ಷಗಳ ನೇಮಕಾತಿ ಪ್ರಕ್ರಿಯೆಗಳು, ಮೌಲ್ಯಮಾಪನ, ಮೀಸಲಾತಿ ಅನುಷ್ಠಾನ, ಅಂಕಗಳ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಎಲ್ಲ ಆಯಾಮಗಳ ಬಗ್ಗೆ ಸ್ವತಂತ್ರ ತನಿಖೆ ನಡೆಯಬೇಕು.

ನಮ್ಮ ಹಕ್ಕೊತ್ತಾಯಗಳು:

  1. ಕೆಪಿಎಸ್‌ಸಿಯ ಎಲ್ಲ ಪ್ರಮುಖ ನೇಮಕಾತಿ ಅಕ್ರಮಗಳ ಕುರಿತು ತಕ್ಷಣ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕು.
  2. ಸಾಹುಕಾರ್ ಅವರ ಅಧ್ಯಕ್ಷತೆಯ ಅವಧಿಯ ಎಲ್ಲ ನೇಮಕಾತಿಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು.
  3. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಕುರಿತು ಪ್ರತ್ಯೇಕ ನ್ಯಾಯಾಂಗ ಅಥವಾ ಉನ್ನತ ಮಟ್ಟದ ತನಿಖೆ ನಡೆಸಬೇಕು.
  4. ಅಕ್ರಮ ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಇತರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  5. ತಪ್ಪು ಕಂಡುಬಂದ ನೇಮಕಾತಿಗಳನ್ನು ಮರುಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು.
  6. ಕೆಪಿಎಸ್‌ಸಿಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸ ಮರುಸ್ಥಾಪಿಸಲು ಶಾಶ್ವತ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು.

ರಾಜ್ಯದ ಲಕ್ಷಾಂತರ ಯುವಜನರ ಭವಿಷ್ಯದ ಪ್ರಶ್ನೆಯಾಗಿರುವ ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ಮುಚ್ಚಿಹಾಕುವ ಪ್ರಯತ್ನ ಮಾಡಬಾರದು. ಸತ್ಯ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಹಾಗೂ ನಿರಪರಾಧ ಅಭ್ಯರ್ಥಿಗಳಿಗೆ ನ್ಯಾಯ ಸಿಗಬೇಕು. ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟವನ್ನು ರಾಜ್ಯದ ಯುವಜನರ ಹಿತದೃಷ್ಟಿಯಿಂದ ಮುಂದುವರಿಸಲಿದೆ.

More articles

Latest article

Most read