ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುವಂತೆ ಕರವೇ ಆಗ್ರಹ

ಕನ್ನಡಿಗರನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಹೋಲಿಸಿ ಅವಮಾನಿಸಿದ್ದ ಸೋನು ನಿಗಂ

ಬೆಂಗಳೂರು, ಅ.14 : ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದಕ ಕೃತ್ಯಕ್ಕೆ ಹೋಲಿಸಿ ಅವಮಾನಿಸಿದ ಗಾಯಕ ಸೋನು ನಿಗಮ್ ಅವರ ಸಂಗೀತ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

2025ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದ ಸಂದರ್ಭದಲ್ಲಿ, ಒಬ್ಬ ವಿದ್ಯಾರ್ಥಿ ಕನ್ನಡ ಹಾಡು ಹಾಡುವಂತೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸೋನು ನಿಗಮ್, “ಕನ್ನಡ, ಕನ್ನಡ, ಕನ್ನಡ, ಇದೇ ಕಾರಣಕ್ಕೆ ಪಹಲ್ಗಾಮ್‌ನಲ್ಲಿ ಘಟನೆ (ಭಯೋತ್ಪಾದಕ ದಾಳಿ) ಸಂಭವಿಸಿತು” ಎಂದು ಹೇಳಿಕೆ ನೀಡಿದ್ದರು. ಕನ್ನಡ ಹಾಡು ಕೇಳುವುದು ಯಾವ ದೃಷ್ಟಿಯಿಂದಲೂ ಅಪರಾಧವಲ್ಲ. ಆದರೆ ಕನ್ನಡಿಗರ ಭಾಷಾಭಿಮಾನವನ್ನು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ತಳುಕು ಹಾಕಿದ್ದು ಅತ್ಯಂತ ಆಕ್ಷೇಪಾರ್ಹ, ಬೇಜವಾಬ್ದಾರಿಯುತ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅಪಮಾನವಾಗಿದೆ.

ಕನ್ನಡಿಗರು ತಮ್ಮ ಭಾಷೆಯನ್ನು ಪ್ರೀತಿಸುವುದು, ಕನ್ನಡದಲ್ಲಿ ಮಾತನಾಡುವಂತೆ ಒತ್ತಾಯಿಸುವುದು ಅಥವಾ ಕನ್ನಡ ಹಾಡನ್ನು ಕೇಳುವುದು ಭಯೋತ್ಪಾದನೆಯೇ? ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಭಯೋತ್ಪಾದಕ ದಾಳಿಗೆ ಹೋಲಿಸುವ ಅಧಿಕಾರವನ್ನು ಸೋನು ನಿಗಮ್ ಅವರಿಗೆ ಕೊಟ್ಟವರಾರು? ಕನ್ನಡಿಗರ ಬಗ್ಗೆ ಇಂತಹ ಕೀಳುಮಟ್ಟದ ಅಭಿಪ್ರಾಯ ವ್ಯಕ್ತಪಡಿಸಿದ ವ್ಯಕ್ತಿಗೆ ಕರ್ನಾಟಕದ ನೆಲದಲ್ಲಿ ಕೆಂಪುಹಾಸಿನ ಸ್ವಾಗತ ನೀಡಬೇಕೆ? ಎಂದಿದ್ದಾರೆ.

ಈ ಹೇಳಿಕೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮರಾಜ್ ಟಿ.ಎ. ಅವರು 2025ರ ಮೇ 2ರಂದು ಆವಲಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಆ ದೂರಿನಲ್ಲಿ ಸೋನು ನಿಗಮ್ ಅವರ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿರುವುದನ್ನು ವಿವರಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಇದು ಸಣ್ಣ ಪ್ರಕರಣವಲ್ಲ, ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಗಂಭೀರ ಸಾರ್ವಜನಿಕ ಆಕ್ಷೇಪವಾಗಿದೆ. ಕನ್ನಡಿಗರು ಈ ಗಾಯವನ್ನು ಇನ್ನೂ ಮರೆತಿಲ್ಲ, ಮರೆಯುವುದೂ ಇಲ್ಲ.

ಇಂತಹ ಹಿನ್ನೆಲೆಯಿರುವಾಗ, ಸೋನು ನಿಗಮ್ ಅವರು 2026ರ ಅಕ್ಟೋಬರ್ 24ರಂದು ಸಂಜೆ 7 ಗಂಟೆಗೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯಲ್ಲಿರುವ ಭಾರತೀಯ ಮಾಲ್ ಆಫ್ ಬೆಂಗಳೂರು (Bhartiya Mall of Bengaluru) ನಲ್ಲಿ ದಿ ರೆವಲ್ಯೂಷನ್‌ ಇಂಡಿಯಾ ಟೂರ್ (The Revolution India Tour) ಹೆಸರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕಾರ್ಯಕ್ರಮದ ಆಯೋಜಕ ಸಂಸ್ಥೆಯಾಗಿ ITW Playworx ಹೆಸರನ್ನು ಉಲ್ಲೇಖಿಸಲಾಗಿದೆ.

ಕನ್ನಡಿಗರನ್ನು ಅವಮಾನಿಸಿದವರಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡುವ ಮತ್ತೊಂದು ಅಪಮಾನವೆಂದೇ ಕರ್ನಾಟಕ ರಕ್ಷಣಾ ವೇದಿಕೆ ಪರಿಗಣಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಜನರ ಭಾಷಾಭಿಮಾನವನ್ನು ಅಪಹಾಸ್ಯ ಮಾಡಿ, ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದ ವ್ಯಕ್ತಿ ಅದೇ ಕನ್ನಡಿಗರ ನಾಡಿನಲ್ಲಿ ಬಂದು ಕಾರ್ಯಕ್ರಮ ನಡೆಸಿ ಹಣ ಸಂಪಾದಿಸುವುದನ್ನು ಕನ್ನಡಿಗರು ಮೌನವಾಗಿ ನೋಡಿಕೊಂಡು ಕುಳಿತುಕೊಳ್ಳುತ್ತಾರೆ ಎಂದು ಯಾರೂ ಭಾವಿಸಬಾರದು. ಕನ್ನಡಿಗರ ತಾಳ್ಮೆಯನ್ನು ದೌರ್ಬಲ್ಯವೆಂದು ಪರಿಗಣಿಸುವ ತಪ್ಪನ್ನು ಸೋನು ನಿಗಮ್ ಆಗಲಿ, ಕಾರ್ಯಕ್ರಮದ ಆಯೋಜಕರಾಗಲಿ ಮಾಡಬಾರದು.

ಸೋನು ನಿಗಮ್ ಅವರ ಹೇಳಿಕೆಯಿಂದ ಈಗಾಗಲೇ ಕನ್ನಡಿಗರಲ್ಲಿ ತೀವ್ರ ಅಸಮಾಧಾನವಿದೆ. ಇಂತಹ ಪರಿಸ್ಥಿತಿಯಲ್ಲಿ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ, ಅದು ಕನ್ನಡಿಗರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸುವುದಲ್ಲದೆ, ದೊಡ್ಡ ಮಟ್ಟದ ಪ್ರತಿಭಟನೆಗಳಿಗೆ ಕಾರಣವಾಗಬಹುದು. ಪರಿಸ್ಥಿತಿ ಕೈಮೀರುವಂತಹ ಸಾರ್ವಜನಿಕ ಉದ್ವಿಗ್ನತೆ ಉಂಟಾಗುವ ಸಾಧ್ಯತೆಯನ್ನೂ ಆಡಳಿತ ನಿರ್ಲಕ್ಷಿಸಬಾರದು. ಇಂತಹ ಬೆಳವಣಿಗೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಬೇಡಿಕೆಗಳು ಹೀಗಿವೆ:

  1. ಅಕ್ಟೋಬರ್ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸೋನು ನಿಗಮ್ ಅವರ ಸಂಗೀತ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು.
  2. ಈಗಾಗಲೇ ಯಾವುದೇ ರೀತಿಯ ಅನುಮತಿ ನೀಡಿದ್ದರೆ, ಹಿಂದಿನ ಹೇಳಿಕೆಯಿಂದ ಉಂಟಾಗಿರುವ ಸಾರ್ವಜನಿಕ ಆಕ್ರೋಶ ಮತ್ತು ಕಾನೂನು ಸುವ್ಯವಸ್ಥೆಯ ಸಾಧ್ಯ ಅಪಾಯಗಳನ್ನು ಪರಿಶೀಲಿಸಿ, ಅನುಮತಿಯನ್ನು ರದ್ದುಪಡಿಸಬೇಕು.
  3. ಸೋನು ನಿಗಮ್ ಅವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಲ್ಲಿಸಿರುವ ಹಿಂದಿನ ದೂರಿನ ಸ್ಥಿತಿಯನ್ನು ಪರಿಶೀಲಿಸಿ, ಕಾನೂನಿನ ಪ್ರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು.
  4. ಕನ್ನಡಿಗರ ಭಾಷಾಭಿಮಾನವನ್ನು ಅವಮಾನಿಸುವ ಮತ್ತು ಭಾಷಿಕ ಸಮುದಾಯಗಳ ನಡುವೆ ಅನಗತ್ಯ ಉದ್ವಿಗ್ನತೆ ಉಂಟುಮಾಡುವ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದ ಕಾಪಾಡಲು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು.

    ಕಾರ್ಯಕ್ರಮದ ಆಯೋಜಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ, ಈ ಕಾರ್ಯಕ್ರಮದಿಂದ ಉಂಟಾಗಬಹುದಾದ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಸಮಸ್ಯೆಗಳನ್ನು ತಡೆಯಲು ಸೂಕ್ತ ನಿರ್ಧಾರ ಕೈಗೊಳ್ಳಬೇಕು.

ಮಾನ್ಯರೇ, ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಭಾಷೆ, ನೆಲ, ಜಲ ಮತ್ತು ಸ್ವಾಭಿಮಾನದ ರಕ್ಷಣೆಗಾಗಿ ನಿರಂತರವಾಗಿ ಹೋರಾಡುತ್ತಿರುವ ಸಂಘಟನೆಯಾಗಿದೆ. ಕನ್ನಡಿಗರನ್ನು ಅವಮಾನಿಸುವವರ ವಿರುದ್ಧ ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ಹೋರಾಟ ನಡೆಸುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ.

ನಮ್ಮ ಈ ಎಚ್ಚರಿಕೆಯನ್ನು ಲಘುವಾಗಿ ಪರಿಗಣಿಸಬಾರದು. ಸೋನು ನಿಗಮ್ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ. ಕನ್ನಡಿಗರ ಸ್ವಾಭಿಮಾನವನ್ನು ಕಡೆಗಣಿಸಿ ಕಾರ್ಯಕ್ರಮ ನಡೆಸಲು ಮುಂದಾದರೆ, ಅದರ ವಿರುದ್ಧ ಸಂಘಟಿತ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ಈ ಹೋರಾಟದ ಸಂಪೂರ್ಣ ಹೊಣೆಗಾರಿಕೆ ನಮ್ಮ ನ್ಯಾಯಸಮ್ಮತ ಬೇಡಿಕೆಯನ್ನು ನಿರ್ಲಕ್ಷಿಸಿ ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸುವ ನಿರ್ಧಾರ ಕೈಗೊಳ್ಳುವವರ ಮೇಲಿರುತ್ತದೆ.

ಕನ್ನಡಿಗರನ್ನು ಅವಮಾನಿಸಿದವರಿಗೆ ಕನ್ನಡಿಗರ ನಾಡಿನಲ್ಲಿ ಗೌರವದ ವೇದಿಕೆ ಕಲ್ಪಿಸಬಾರದು. ಕನ್ನಡಿಗರ ಸ್ವಾಭಿಮಾನಕ್ಕಿಂತ ಯಾವುದೇ ಕಲಾವಿದನ ಕಾರ್ಯಕ್ರಮ ದೊಡ್ಡದಲ್ಲ. ಆದ್ದರಿಂದ, ಸಾರ್ವಜನಿಕ ಶಾಂತಿ, ಕನ್ನಡಿಗರ ಭಾವನೆಗಳು ಮತ್ತು ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು, ಸೋನು ನಿಗಮ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುವಂತೆ ಮತ್ತೊಮ್ಮೆ ಆಗ್ರಹಿಸುತ್ತೇವೆ. ಈ ಮನವಿಯ ಕುರಿತು ತುರ್ತಾಗಿ ಸೂಕ್ತ ನಿರ್ಧಾರ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ನಮಗೆ ಲಿಖಿತವಾಗಿ ತಿಳಿಸಬೇಕೆಂದು ಒತ್ತಾಯಿಸಿದ್ದಾರೆ.

More articles

Latest article

Most read