ಕಾರವಾರ: ಜೈಲಿನಲ್ಲಿ ಮಾದಕ ವಸ್ತುಗಳನ್ನು ನಿಷೇಧ ಮಾಡಿದ್ದಕ್ಕೆ ಕೋಪಗೊಂಡು ಜೈಲರ್ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜಿಲ್ಲಾ ಕಾರಾಗೃಹದಲ್ಲಿ ಕಳೆದ ಕೆಲವು ದಿನಗಳಿಂದ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿತ್ತು. ಇದರಿಂದ ಸಿಟ್ಟಿಗೆದ್ದ ರೌಡಿಗಳು ಗಲಾಟೆ ಮಾಡಿ, ಜೈಲರ್ ಗೆ ಮನಬಂದಂತೆ ಥಳಿಸಿದ್ದಾರೆ
ಮಂಗಳೂರು ಮೂಲದ ಕುಖ್ಯಾತ ರೌಡಿಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬುವವರು, ಜೈಲರ್ ಕಲ್ಲಪ್ಪ ಗಸ್ತಿ ಹಾಗೂ ಇತರೆ ಮೂವರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಜೈಲರ್ ಮತ್ತು ಸಿಬ್ಬಂದಿಯನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

