ಲೋಕ ಚುನಾವಣೆ : ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಚಿತ್ರದುರ್ಗ ಪೆಂಡಿಂಗ್!

Most read

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು,ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ.

ಬಿಜೆಪಿ ಹೈಕಮಾಂಡ್‌ ಐದನೇ ಪಟ್ಟಿಯಲ್ಲಿ 111 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಘೋಷಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿದಿದ್ದ ಐದು ಕ್ಷೇತ್ರಗಳ ಫೈಕಿ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಿಸಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನ ಹೈಕಮಾಂಡ್‌ ಬಾಕಿ ಉಳಿಸಿಕೊಂಡಿದೆ.

ಬೆಳಗಾವಿಯ ಹಾಲಿ ಸಂಸದೆಯಾದ ಮಂಗಳ ಅಂಗಡಿ ಅವರಿಗೆ ಟಿಕೆಟ್‌ ಕೈ ತಪ್ಪಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಬೆಳಗಾವಿ ಟಿಕೆಟ್‌ ನೀಡಲಾಗಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಹಾಲಿ ಸಂಸದರಾದ ಅನಂತ್‌ ಕುಮಾರ್ ಹೆಗಡೆಗೆ ಟಿಕೆಟ್‌ ಕೈ ತಪ್ಪಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಹೈಕಮಾಂಡ್‌ ಟಿಕೆಟ್‌ ನೀಡಿದೆ. ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವರಾದ ಡಾ.ಕೆ ಸುಧಾಕರ್‌ ಗೆ ಟಿಕೆಟ್‌ ನೀಡಿದೆ.

More articles

Latest article