ಬುದ್ಧ ಪೂರ್ಣಿಮಾ ಹಿನ್ನೆಲೆ ಮೇ 23 ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡದಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ, ದಿನಾಂಕ: 23-05-2024 ಗುರುವಾರದಂದು “ಬುದ್ಧ ಪೂರ್ಣಿಮಾ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲೂ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ಮೇ 23 ರಂದು ಬುದ್ಧ ಪೂರ್ಣಿಮೆ ಪ್ರಯುಕ್ತ ಅಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟಗಾರರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.