Wednesday, May 22, 2024

Karnataka Budget 2024: ಸಿಎಂ ಸಿದ್ದರಾಮಯ್ಯರ 15ನೇ ಬಜೆಟ್ ಮಂಡನೆ Live​ ಇಲ್ಲಿದೆ​

Most read

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ.

ಪಂಚ ಗ್ಯಾರಂಟಿಗಳ ಭರವಸೆಗಳನ್ನು ನೀಡಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆದ್ದಿದ್ದ ಕಾಂಗ್ರೆಸ್ ಗೆ ಈ ಬಾರಿಯ ಬಜೆಟ್ ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಹಳ ಪ್ರಮುಖವಾದುದು. ಈ ಬಜೆಟ್ ನಲ್ಲಿ ರಾಜ್ಯ ಸರ್ಕಾರ ನೀಡುವ ಕೊಡುಗೆಗಳು ಲೋಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬುನಾದಿಯಾಗಬಲ್ಲುದು ಎಂಬ ನಿರೀಕ್ಷೆ ಕಾಂಗ್ರೆಸ್ ಪಕ್ಷದ್ದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಸಂಪೂರ್ಣ ಬಜೆಟ್​ ಹಲವು ನಿರೀಕ್ಷೆ ಮೂಡಿಸಿದೆ. ಬಜೆಟ್​ ಲೈವ್ ಇಲ್ಲಿದೆ ನೋಡಿ…

• ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಬಜೆಟ್​​ನಲ್ಲಿ ಸಿಎಂ ಘೋಷಣೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದರು. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.

• ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ: ಸಿಎಂ ಘೋಷಣೆ

ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ದೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

• 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ

ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್​ ಹಾಗೂ ಇಂಟರ್​ನೆಟ್​ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

• ಸೈನ್ಸ್​ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಗೆ 10 ಕೋಟಿ ರೂ.

ರಾಜ್ಯದ 20 ಸಾವಿರ ಸೈನ್ಸ್​ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

• ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ.

ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಒದಗಿಸಲಾಗುವುದು. ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

• ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ: ಸಿಎಂ ಘೋಷಣೆ

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

• ಸಹಕಾರ ವಲಯವನ್ನು ಬಲ

“ಸಹಕಾರ ವಲಯವನ್ನು ಬಲ ಬಡಿಸುವುದು ಸರಕಾರದ ಒತ್ತು. ಬಡ್ಡಿ ರಹಿತ ಸಾಲವನ್ನು 3 ರಿಂತ 5 ಲಕ್ಷ ರೂ.ವರೆಗೆ ಏರಿಸಲು ಮಹತ್ತರ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ 36 ಲಕ್ಷಕ್ಕಿಂತಲೂ ಹೆಚ್ಚಿನ ರೈತರಿಗೆ 27 ಕೋಟಿ ರೂ. ದಾಖಲೆ ಸಾಲ ನೀಡಲು ಚಿಂತನೆ.”

ವೀನುಗಾರರಿಗೆ ಬಂಪರ್

ಮೀನುಗಾರಿಗೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ. ಹೊನ್ನಾವರ, ಭದ್ರಾವತಿ, ಭಟ್ಕಳದಲ್ಲಿ ಮೀನುಗಾರಿಕಾ ಅಭಿವೃದ್ಧಿಗೆ ಅಗತ್ಯ ಅಭಿವೃದ್ಧಿ ಯೋಜನೆಗಳು ನೆರವು. ಅನುದಾನ ಹೆಚ್ಚಳಕ್ಕೆ ಒತ್ತು. ಅಪಘಾತಕ್ಕೊಳಗಾಗುವ ಮೀನುಗಾರರನ್ನು ತ್ವರಿತವಾಗಿ ಕರೆ ತರಲು ನೆರವಾಗುವಂತೆ ಸಮುದ್ರ ಆ್ಯಂಬುಲೆನ್ಸ್ ಗೆ ಅಗತ್ಯ ನೆರವು. ನಬಾರ್ಡ್ ಸಹಯೋಗದಲ್ಲಿ ವಿವಿಧ ಅಭಿೃವದ್ಧಿ ಯೋಜನೆಗಳಿಗೆ ಒತ್ತು. 

ರೈತರಿಗೆ ಸಿದ್ದರಾಮಯ್ಯ ಬಂಪರ್‌

ರೈತ ಸಮೃದ್ಧಿ ಯೋಜನೆ ಘೋಷಣೆ

ಒಂದೇ ಸೂರಿನಡಿ ತೋಟಗಾರಿಕೆ ಉತ್ಪನ್ನ ಮಾರಾಟ

ಕಿಸಾನ್‌ ಮಾಲ್‌ಗಳ ಮೂಲಕ ತೋಟಗಾರಿಕೆ ಉತ್ಪನ್ನ ಮಾರಾಟ

5 ಸಾವಿರ ಸಣ್ಣ ಸರೋವರಗಳ ನಿರ್ಮಾಣಕ್ಕೆ ಕ್ರಮ, ಹನಿ ನೀರಾವರಿಗೆ ಆದ್ಯತೆ

  • ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು
  • ರೈತ ಮಹಿಳೆಯರ ಹೈನುಗಾರಿಕೆಗೆ ಶೇ.6ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ
  • ಮೀನುಗಾರಿಕೆ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮೀಸಲು

• ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್

90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ

• ಸಿಎಂ ಬಜೆಟ್ ಮಂಡನೆ ವೇಳೆ ಬಿಜೆಪಿ ಸದಸ್ಯರ ಗದ್ದಲ

ಬಜೆಟ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೆರಿಗೆ ಹಂಚಿಕೆ, ಜಿಎಸ್‌ಟಿ ಹಣ ಕಡಿಮೆ ಕೊಟ್ಟಿದ್ದಕ್ಕೆ ಬಜೆಟ್‌ನಲ್ಲಿ ಆರೋಪ. ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದ ಹಾಗೆ ಬಿಜೆಪಿ ಕೆಂಡಾಮಂಡಲ.

• ಇಲಾಖಾವಾರು ಅನುದಾನ

ಶಿಕ್ಷಣ – 44,422 ಕೋಟಿ

ಮಹಿಳಾ ಮತ್ತು ಮಕ್ಕಳ ಇಲಾಖೆ – 34,406 ಕೋಟಿ

ಇಂಧನ – 23,159 ಕೋಟಿ

ಗ್ರಾಮೀಣಾಭಿವೃದ್ಧಿ – 21,160 ಕೋಟಿ

ಒಳಾಡಳಿತ/ಸಾರಿಗೆ – 19,777 ಕೋಟಿ

ನೀರಾವರಿ – 19,179 ಕೋಟಿ

ನಗರಾಭಿವೃದ್ಧಿ- 18,155 ಕೋಟಿ

ಕಂದಾಯ – 16,170 ಕೋಟಿ

ಆರೋಗ್ಯ – 15,145 ಕೋಟಿ

ಸಮಾಜಕಲ್ಯಾಣ – 13,334 ಕೋಟಿ

ಲೋಕೋಪಯೋಗಿ – 10,424 ಕೋಟಿ

ಆಹಾರ ಇಲಾಖೆ – 9963 ಕೋಟಿ

ಕೃಷಿ , ತೋಟಗಾರಿಕೆ – 6,688 ಕೋಟಿ

ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ

ಇತರೆ – 1,24,593 ಕೋಟಿ

• ರೈತರು ಬೆಳೆದ ಬೆಳೆಗೆ ಉತ್ತಮ ಮಾರುಕಟ್ಟೆ

ರೈತರು ಬೆಳೆದ ಬೆಳೆಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಒದಗಿಸುವ ಜೊತೆಗೆ, ಕೃಷಿ, ತೋಟಗಾರಿಗೆ, ಪಶು ಸಂಗೋಪನೆ ಇಲಾಖೆಗಳ ಸಮನ್ವಯ ಸಾಧಿಸಲು ಸಿಎಂ ನೇತೃತ್ವದಲ್ಲಿ ಪ್ರಾಧಿಕಾರ ಸ್ಥಾಪಿಸಲು ನಿರ್ಧರಿಸಲಾಗಿದೆ. ಸ್ಥಳೀಯ ಬೆಳೆಗಳ ತಳಿಗಳನ್ನು ಸಂರಕ್ಷಿಸಲು, ಬೆಳೆಸಲು ಬೀಜ ಬ್ಯಾಂಕ್ ಆರಂಭ. ಸಿರಿ ಧಾನ್ಯನಗಳು ಹಾಗೂ ಮೌಲ್ವವರ್ಧಿಕ ಉತ್ಪನ್ನಗಳನ್ನು ಕೈ ಗೆಟುಕುವ ದರದಲ್ಲಿ ಒದದಿಸಲು ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಕ್ರಮ. 

ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮದ್ಯದ ದರ ಮತ್ತೆ ಹೆಚ್ಚಳ: ಬಜೆಟ್​​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದರು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಈ ವರ್ಷದ ಬಜೆಟ್ ಗಾತ್ರ 3.71 ಲಕ್ಷ ಕೋಟಿ ಬಜೆಟ್

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

ನಮ್ಮ ಗ್ಯಾರಂಟಿಗಳನ್ನೇ ಕದ್ದು ನಮ್ಮನ್ನು ಟೀಕಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಆದಾಯ ಪ್ರಮಾಣ ಹೆಚ್ಚಾಗಿದೆ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ನಮ್ಮನ್ನೇ ಟೀಕಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ

ರಾಜ್ಯ ಬಜೆಟ್: ಬಜೆಟ್ ಸೂಟ್ ಕೇಸ್ ಬದಲು ಲಿಡ್ಕರ್ ಬ್ಯಾಗ್ !

ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವರು ಸೂಟ್ ಕೇಸ್ ನೊಂದಿಗೆ ಆಗಮಿಸಿವುದು ಸಂಪ್ರದಾಯವಾಗಿತ್ತು. ಈ ಬಾರಿ ರಾಜ್ಯದಲ್ಲಿ ಈ ಬಾರಿ ಸಿದ್ದರಾಮಯ್ಯ ಅವರು ಲಿಡ್ಕರ್ ಬ್ಯಾಗ್ ನೊಂದಿಗೆ ಆಗಮಿಸಿದ್ದಾರೆ. ಇದು ಚರ್ಮ ಕೈಗಾರಿಕೆ ಯನ್ನು ಪ್ರೋತ್ಸಾಹಿಸುವುದಕ್ಕಾಗಿ ಎಂದು ಹೇಳಲಾಗಿದೆ.

More articles

Latest article