ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರೇವಣ್ಣ ವಿರುದ್ಧದ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ ನಲ್ಲಿ 2,144 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಜ್ವಲ್ ತನ್ನ ಕುಟುಂಬದಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಜೆಡಿಎಸ್ ನಾಯಕರೂ ಆಗಿರುವ ಪ್ರಜ್ವಲ್ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ.
ಪ್ರಜ್ವಲ್ ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ. ಈಗ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕಾರಣ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದಂತೆ ಆಗಿದೆ.