ಕರ್ನಾಟಕ ಹೈಕೋರ್ಟ್‌ನ ನಾಲ್ವರು ಸೇರಿ ಏಳು ನ್ಯಾಯಮೂರ್ತಿಗಳ ವರ್ಗಾವಣೆ

Most read

ಬೆಂಗಳೂರು:  ಕರ್ನಾಟಕ ಹೈಕೋರ್ಟ್‌  ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್, ಕೆ.ನಟರಾಜನ್, ಹೇಮಂತ್ ಚಂದನಗೌಡರ್ ಮತ್ತು ಸಂಜಯ್ ಗೌಡ ಅವರನ್ನು ವಿವಿಧ ರಾಜ್ಯಗಳ ಹೈಕೋರ್ಟ್‌ ಗಳುಗೆ ವರ್ಗಾವಣೆ ಮಾಡಲಾಗಿದೆ.

ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ ಗೆ, ನ್ಯಾ.ಕೃಷ್ಣನ್ ನಟರಾಜನ್ (ಕೆ ನಟರಾಜನ್) ಕೇರಳ ಹೈಕೋರ್ಟ್‌ ಗೆ, ಎನ್‌.ಎಸ್. ಸಂಜಯ್ ಗೌಡ ಅವರನ್ನು ಗುಜರಾತ್ ಹೈಕೋರ್ಟ್‌ ಗೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನು ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

ತೆಲಂಗಾಣದ ನ್ಯಾಯಮೂರ್ತಿಗಳಾದ  ಪೆರುಗು ಶ್ರೀ ಸುಧಾ ಅವರನ್ನು ಕರ್ನಾಟಕ ಹೈಕೋರ್ಟ್‌ ಗೆ, ಕೆ ಸುರೇಂದರ್ ಅವರನ್ನು ಮದ್ರಾಸ್ ಹೈಕೋರ್ಟ್‌ ಗೆ, ಆಂಧ್ರ ಪ್ರದೇಶದ ನ್ಯಾ.ಡಾ. ಕೆ. ಮನ್ಮಥ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ಬೇರೆ ಬೇರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂಬ ವದಂತಿ ಹರಡುತ್ತಿದ್ದಂತೆ ಧಾರವಾಡ ವಕೀಲರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಸಂಘದ ಅಧ್ಯಕ್ಷ ವಿ.ಎಂ.ಶೀಲವಂತ್ ಅವರು ಈ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ಪತ್ರ ಬರೆದು ನ್ಯಾಯಮೂರ್ತಿಗಳ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿದ್ದರು.

More articles

Latest article