ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1 – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ನಂ1 ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಮಂತ್ರಿಗಳು ರೈತರಿಗೆ ಉತ್ತಮವಾದ ಬಿತ್ತನೆ ಬೀಜ, ಗೊಬ್ಬರ, ಔಷಧಿ ಸರ್ಕಾರ ಒದಗಿಸುತ್ತಿದ್ದು, ಯಂತ್ರೋಪಕರಣಗಳ ಖರೀದಿಗೆ 1,500 ಕೋಟಿ ಸಹಾಯಧನವನ್ನು ನೀಡಲಾಗುತ್ತಿದೆ. ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆ ಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ. ಕಬ್ಬು, ರಾಗಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಸುವುದಕ್ಕೆ ರೈತರು ಸೀಮಿತವಾಗುತ್ತಿದ್ದಾರೆ. ಆದರೆ ಬೆಳೆ ತೆಗೆದ ನಂತರದ ಚಟುವಟಿಕೆಗಳನ್ನು ರೈತರು ಕೈಗೊಳ್ಳಬೇಕು. ಕಬ್ಬು ಬೆಳೆ ರೈತರೊಂದಿಗೆ ಚರ್ಚಿಸಿ ಸಂಧಾನ ನಡೆಸಿ ಕಬ್ಬು ಬೆಳೆಗೆ ಬೆಲೆ ನಿಗದಿ ಪಡಿಸಲಾಯಿತು. ಅಂತೆಯೇ ತೊಗರಿ ಬೆಳೆಗೆ ಖರೀದಿ ಕೇಂದ್ರವನ್ನು ಒಂದು ತಿಂಗಳ ಮುಂಚೆಯೇ ತೆರೆದು ರೈತರಿಗೆ ಅನುಕೂಲ ಕಲ್ಪಿಸಲಾಯಿತು. ಮೆಕ್ಕೆ ಜೋಳ ಹೆಚ್ಚುವರಿ ಇಳುವರಿ ಬಂದು 54 ಲಕ್ಷ ಮೆ.ಟನ್ ಉತ್ಪಾದನೆಯಾಗಬಹುದಾಗಿದೆ. ಆದ್ದರಿಂದ ಕೇಂದ್ರ ಕ್ವಿಂಟಾಲ್ ಒಂದಕ್ಕೆ 2400 ರೂ. ನಿಗದಿಪಡಿಸಿದ್ದು, ಮೆಕ್ಕೆಜೋಳ ಬಳಸುವ ಕಾರ್ಖಾನೆಗಳು, ಎಥನಾಲ್ ತಯಾರಕರೊಂದಿಗೆ ಚರ್ಚೆ ನಡೆಸಿ, 40 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಅನುವು ಮಾಡಿಕೊಡಲಾಯಿತು ಎಂದು ಅವರು ಹೇಳಿದರು.

More articles

Latest article

Most read