ಬೆಂಗಳೂರು: ಖ್ಯಾತ ನಟ ವಿಷ್ಣುವರ್ಧನ್ ಮತ್ತು ಖ್ಯಾತ ಅಭಿನೇತ್ರಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸರ್ಕಾರ ಘೋಷಣೆ ಮಾಡಿದೆ. ಹಾಗೆಯೇ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಮುಸ್ಲಿಮರ ಕಾಲೋನಿ ಅಭಿವೃದ್ಧಿಗೆ ರೂ.398 ಕೋಟಿ ಒದಗಿಸಲು ಸಂಪುಟ ತೀರ್ಮಾನಿಸಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಗಣ್ಯರಿಗೆ ಮಿತಿ ಹೇರಲು ಸರ್ಕಾರ ಮುಂದಾಗಿದ್ದು, ಇನ್ನು ಮುಂದೆ ಕನಿಷ್ಠ 9 ಗಣ್ಯರಿಗಷ್ಟೇ ಆಹ್ವಾನ ನೀಡಲಾಗುತ್ತದೆ. ಅನಿವಾರ್ಯವಿದ್ದರೆ ಮಾತ್ರ 11 ಗಣ್ಯರನ್ನು ಆಹ್ವಾನಿಸಬಹುದು ಎಂದೂ ನಿರ್ಣಯ ತೆಗೆದುಕೊಳ್ಳಲಾಗಿದೆ.