ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ ಚಂಡಿಗಡ ಮತ್ತು ಅರುಣಾಚಲ ಪ್ರದೇಶ ಅಧ್ಯಕ್ಷರ ನೇಮಕವನ್ನು ಎಐಸಿಸಿ ಹೊರಡಿಸಿದೆ.

ಎರಡು ವಾರಗಳ ಹಿಂದೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸಂದರ್ಶನ ನಡೆಸಿದ್ದ ಕಾಂಗ್ರೆಸ್ ಹೈಕಮಾಂಡ್, ಅಂತಿಮವಾಗಿ ಸೌಮ್ಯರೆಡ್ಡಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆಯಾಗಿ ಅವಕಾಶ ಮಾಡಿಕೊಟ್ಟಿದೆ. ಈ ಕುರಿತು ಅಧಿಕೃತವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆದೇಶ ಪತ್ರ ಹೊರಡಿಸಿದ್ದಾರೆ.

41 ವರ್ಷದ ಸೌಮ್ಯ ರೆಡ್ಡಿ ಒಂದು ಬಾರಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲವೇ ಕಲವು ಮತಗಳಿಂದ ಸೋಲನ್ನು ಅನುಭವಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.‌ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು.

More articles

Latest article

Most read