ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೋವಿ ಡ್ ಪಾಸಿಟಿವ್ ( Covid Positive ) ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.
ಈ ಕುರಿತಂತೆ ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್ ಪರೀಕ್ಷೆಗೆ ( Covid Test ) ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ
ಕೋವಿಡ್ ಪಾಸಿಟಿವ್ ( Corona Positive ) ಎಂಬುದಾಗಿ ತಿಳಿದು ಬಂದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ( Covid Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟ ಕಾರಣ, ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿರೋದಾಗಿ ತಿಳಿಸಿದೆ.
ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಂಜಾಗ್ರತಾ ಕ್ರಮವಾಗಿ ರಾಜಭವನದಲ್ಲೇ ಕ್ವಾರಂಟೈನ್ ಆಗಲಿದ್ದಾರೆ. ಅವರು ಕೋವಿಡ್ ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಆರೋಗ್ಯವಾಗಿದ್ದಾರೆ. ಅವರಿಗೆ ಕೋವಿಡ್ ಚಿಕಿತ್ಸೆಯು ರಾಜಭವನದಲ್ಲೇ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.