Saturday, December 7, 2024

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ FDA ನೇಮಕಾತಿ : ಇವತ್ತೇ ಅರ್ಜಿ ಸಲ್ಲಿಸಿ

Most read

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು KEA ನೇಮಕಾತಿ ಆದೇಶ ಹೊರಡಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ

  • ಸಹಾಯಕ ಇಂಜಿನಿಯರ್ ( ಸಿವಿಲ್ ) :- ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ BE/B.Tech ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು.

(ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.)

  • ಪ್ರಥಮ ದರ್ಜೆ ಲೆಕ್ಕ ಸಹಾಯಕರು: ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.

ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು;

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು

ಹುದ್ದೆಗಳ ವರ್ಗೀಕರಣ: ಈ ಅಧಿಸೂಚನೆಯ ಕೊನೆಯಲ್ಲಿ ಪ್ರಕಟಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯಲ್ಲಿ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.

ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ :- 10/02/2024

ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 10/03/2024

ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ :- 14/03/2024

ಶುಲ್ಕ: ಆನ್ ಲೈನ್ ಮೂಲಕ ಶುಲ್ಕ ಪಾವತಿಸಬಹುದಾಗಿರುತ್ತದೆ.

ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು :- 750/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು :- 500/-

ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಭರ್ತಿ ಮಾಡುವ ಮೊದಲು ಅರ್ಹತೆಗೆ ಸಂಬಂಧಿಸಿದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಹಾಗೂ ನೀಡಿರುವ ಸೂಚನೆಗಳನ್ವಯ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು, ತಪ್ಪು ಅಥವಾ ಸುಳ್ಳು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ಯಾವುದೇ ಸಮಯದಲ್ಲಿಯಾದರೂ ಅಭ್ಯರ್ಥಿತನವು ರದ್ದುಗೊಳ್ಳುವುದು ಹಾಗು ನಿಯಮಾನುಸಾರ ಅಂತಹವರ ವಿರುದ್ಧ ಸರ್ಕಾರವು / ಪ್ರಾಧಿಕಾರ / ಸಂಸ್ಥೆಯು ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳುವುದು.

More articles

Latest article