Friday, December 6, 2024

ಕರ್ನಾಟದಕ ಈ ನಗರದಲ್ಲಿ ಇಂದಿನಿಂದ ಮೂರು ದಿನ ‘ಮದ್ಯ’ ಮಾರಾಟ ನಿಷೇಧ : ಕಾರಣವೇನು ಗೊತ್ತೇ?

Most read

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಹಿನ್ನೆಲೆಯಲ್ಲಿ ಇಂದಿನಿಂದ (ಫೆ.14) ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ -10(ಬಿ) ರನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಪ್ರಯುಕ್ತ, ಫೆ. 14 ಸಂಜೆ 5.00 ಗಂಟೆಯಿಂದ ಫೆ.17 ಬೆಳಗ್ಗೆ 6.00 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಪಾನನಿರೋಧ ದಿನ ಜಾರಿಗೊಳಿಸಲಾಗುತ್ತಿದೆ. ಆದ್ದರಿಂದ ಫೆ.14 ರಿಂದ ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.

ಪಾರದರ್ಶಕವಾಗಿ ಚುನಾವಣೆ ನಡೆಸಲು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತದಾನ ಅಂತ್ಯಗೊಳ್ಳುವ 48 ಗಂಟೆ ಪೂರ್ವದಲ್ಲಿ ಮತ್ತು ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿರ್ಬಂಧಿಸಲಾಗಿದ್ದು, ನಿಯಮ ಉಲ್ಲಂಘಿಸ ಮದ್ಯ ಸಾಗಣೆ, ಮಾರಾಟ ಅಥವಾ ದಾಸ್ತಾನು ಮಾಡಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

More articles

Latest article