ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ  ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿ,  ಕೆ.ಸಿ.ರೆಡ್ಡಿಯವರ 48 ನೇ ಪುಣ್ಯ ತಿಥಿಯನ್ನು ಇಂದು ಆಚರಿಸಲಾಗಿದೆ. ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳು. ರಾಜ್ಯದ ಬೆಳವಣಿಗೆಗೆ ಅಡಿಪಾಯ ಹಾಕಿದವರು ಅವರು. ಸ್ವಾತಂತ್ರ್ಯ ಹೋರಾಟಗಾರರಾಗಿ ತಮ್ಮನ್ನು ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಇಂದು ಆರ್ಥಿಕವಾಗಿ ಸಧೃಢವಾಗಿದ್ದರೆ ಅವರು ಹಾಕಿದ ಬುನಾದಿಯೇ ಕಾರಣ. 1950 ನೇ ಇಸವಿಯಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಮೊದಲ ಚುನಾವಣೆಯಲ್ಲಿ  ಕೆ.ಸಿ.ರೆಡ್ಡಿಯವರೇ ಮೊದಲ ಮುಖ್ಯ ಮಂತ್ರಿಯಾದರು. ಅವರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು  ಸರ್ಕಾರ ಮಾಡಿದೆ ಎಂದರು.

ಜೆ.ಡಿ.ಎಸ್ ಗೆ ಆತ್ಮಸಾಕ್ಷಿ ಇದೆಯೇ

ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು  ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಪ್ರಶ್ನಿಸಿ ಅವರ ಮತಗಳೇ ನಮಗೆ ಬರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಡ್ಡಮತ ವಿಚಾರವಾಗಿ ಕಾನೂನು ತಿದ್ದಿ ಎಫ್.ಐ.ಆರ್. ಹಾಕಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಅವರಿಗೆ ಮತವಿಲ್ಲ ದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ , ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ ಎಂದರು. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

More articles

Latest article

Most read