ರೀಟ್ವೀಟ್ ಮಾಡಿ ತಪ್ಪು ಮಾಡಿದ್ದೇನೆ : ಸುಪ್ರೀಂಕೋರ್ಟ್‌ನಲ್ಲಿ ತಪ್ಪೊಪ್ಪಿಕೊಂಡ ಕೇಜ್ರಿವಾಲ್‌

Most read

ಧ್ರುವ್ ರಾಥಿ ಅವರ ಮಾಡಿದ ಬಿಜೆಪಿ ಐಟಿ ಸೆಲ್‌ಗೆ (BJP IT Cell) ಸಂಬಂಧಿಸಿದ ಮಾನಹಾನಿಕರ ವಿಡಿಯೋವನ್ನು ರಿಟ್ವೀಟ್‌ ಮಾಡುವ ಮೂಲಕ ತಾನು ತಪ್ಪು ಮಾಡಿದ್ದೇನೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ (Delhi CM Aravind Kejriwal) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ತಪ್ಪು ಒಪ್ಪಿಕೊಂಡಿದ್ದಾರೆ.

ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸೆ, ರೀಟ್ವೀಟ್ ಮಾಡುವುದರಿಂದಾಗುವ ಪರಿಣಾಮ ಏನು ಗೊತ್ತೇ? ಒಮ್ಮೆ ಯಾವುದೇ ಸುದ್ದಿಗಳನ್ನು ಹಂಚಿಕೊಳ್ಳುವುದರಿಂದ ಅತೀಬೇಗ ಮಾಹಿತಿ ಜನರಬಳಿ ತಲುಪುತ್ತದೆ. ಮತ್ತದನ್ನು ಜನರ ಕಿವಿಯಿಂದ ಕಿವಿಗೆ ಹರಡುತ್ತಾ ಹೋಗುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್‌ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಕೇಜ್ರಿವಾಲ್‌ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ (Delhi Court) ನಡೆಯುತ್ತಿದ್ದ ಮಾನನಷ್ಟ ಕೇಸ್‌ ಅರ್ಜಿಯ ವಿಚಾರಣೆಗೆ ತಡೆ ನಡೆದಿದೆ. ತಡೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದೆ.

ಕೇಜ್ರಿವಾಲ್‌ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮಗೆ ನೀಡಲಾಗಿದ್ದ ಸಮನ್ಸ್ ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು .

More articles

Latest article