ಹೊಸದಿಲ್ಲಿ: ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.
ಬಂಧನದ ನಂತರ ಕೇಜ್ರಿವಾಲ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಜಾರಿ ನಿರ್ದೇಶನಾಲಯ ನಿರೀಕ್ಷೆಯಂತೆ ಕೇಜ್ರಿವಾಲ್ ಕಸ್ಟಡಿ ಕೇಳಲಿದ್ದಾರೆ. ಪ್ರಕರಣ ಈ ಹಂತದಲ್ಲಿ ಇರುವಾಗ ತಾವು ಅರ್ಜಿಯನ್ನು ಹಿಂದಕ್ಕೆ ಪಡೆಯುವುದಾಗಿ ಸುಪ್ರೀಂ ಕೋರ್ಟಿಗೆ ವಕೀಲರಾದ ಅಭಿಷೇಕ್ ಸಿಂಗ್ವಿ ತಿಳಿಸಿದರು.
ಪ್ರಕರಣ ಇಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಖನ್ನಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಬಂದಾಗ, ಇದು ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಯಾಗಿರುವ ಕುರಿತು ನ್ಯಾಯಾಧೀಶರು ಗಮನ ಸೆಳೆದರು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂ.ಎಂ.ಸುಂದರೇಶ್, ಬೇಲಾ ತ್ರಿವೇದಿಯವರ ತ್ರಿಸದಸ್ಯ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯಬೇಕಿತ್ತು. ರಿಮ್ಯಾಂಡ್ ವಿಚಾರಣೆ ನಡೆಯುತ್ತಿರುವುದರಿಂದ ತಾವು ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ಸಿಂಗ್ವಿ ಹೇಳಿದರು.