ಕೆಂಪೇಗೌಡರ ಜಯಂತಿ ದೊಡ್ಡ ಗೌಡರ ಕುಟುಂಬ ಕಡೆಗಣನೆ ಆರೋಪ: ಸರ್ಕಾರದ ವಿರುದ್ಧ ಒಕ್ಕಲಿಗರ ಸಂಘ ಆಕ್ರೋಶ

Most read

ಸಾಲು ಸಾಲು ವಿವಾದಗಳಿಂದಾಗಿ ಸುದ್ದಿಯಲ್ಲಿರುವ ದೊಡ್ಡ ಗೌಡರ ಕುಟುಂಬವನ್ನು ಕೆಂಪೇಗೌಡರ ಜಯಂತಿ ವಿಚಾರದಲ್ಲಿ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ರಾಜ್ಯ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಹೌದು, ರಾಜ್ಯದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುತ್ತಿದ್ದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನಿ ನೀಡದೇ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ರಾಜ್ಯ ಒಕ್ಕಲಿಗರ ಸಂಘ ಆರೋಪಿಸಿದೆ.

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಜೊತೆ ರಾಜ್ಯದ ಎಲ್ಲ ಮಕ್ಕಳಿಗೂ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಚರ್ಚಾ ಸ್ಪರ್ಧೆ ಕೂಡ ಏರ್ಪಡಿಸಿಲಾಗಿದೆ. ಆದರೆ ಇಷ್ಟು ಅದ್ದೂರಿಯಾಗಿ ಮಾಡುತ್ತಿರುವ ಜಯಂತಿಗೆ ಒಕ್ಕಲಿಗ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಹರ ಆಹ್ವಾನ ನೀಡಿಲ್ಲ ಎಂದು ರಾಜ್ಯ ಒಕ್ಕಲಿಗರ ಸಂಘ ಆರೋಪಿಸಿದೆ

ಸರ್ಕಾರದ ನಡವಳಿಕೆಯನ್ನ ಖಂಡಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ರಾಜ್ಯ ಒಕ್ಕಲಿಗರ ಸಂಘ,  ರಾಜ್ಯ ಸರ್ಕಾರದ ವತಿಯಿಂದ ನಾಳೆ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿಯನ್ನ ಆಚರಿಸುತ್ತಿರುವುದು ಸಂತೋಷ ವಿಚಾರ. ಆದರೆ,   ಕಾರ್ಯಕ್ರಮಕ್ಕೆ ಒಕ್ಕಲಿಗ ಸಂಘದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನ ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘವು ತೀವ್ರ ಖಂಡಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

More articles

Latest article