ಕೇರಳ ರಾಜ್ಯದ ಹೆಸರನ್ನು ʼಕೇರಳಂʼ ಎಂದು ಬದಲಾಯಿಸುವ ನಿರ್ಣಯಕ್ಕೆ ವಿಧಾನಸಭೆ ಅಂಗೀಕಾರ

Most read

ಕೇರಳದ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಕೇರಳ ವಿಧಾನಸಭೆಯು ಇದೇ ರೀತಿಯ ನಿರ್ಣಯವನ್ನು ಕಳೆದ ವರ್ಷ ಅವಿರೋಧವಾಗಿ ಅಂಗೀಕರಿಸಿತ್ತು. ಕೆಲವು ತಿದ್ದುಪಡಿಗಾಗಿ ಕೇಂದ್ರ ಸರ್ಕಾರ ಅದನ್ನು ಹಿಂದಿರುಗಿಸಿತ್ತು. ಈಗ ಮತ್ತೆ ನಿರ್ಣಯವನ್ನು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಕಳುಹಿಸಲಾಗಿದೆ.

ನಿರ್ಣಯವನ್ನು ಮಂಡಿಸಿದ ಕೇರಳ ಸಿಎಂ ವಿಜಯನ್, ರಾಜ್ಯವನ್ನು ಮಲಯಾಳಂ ಭಾಷೆಯಲ್ಲಿ ‘ಕೇರಳಂ’ ಎಂದು ಕರೆಯುತ್ತಾರೆ. ನಮ್ಮ ರಾಜ್ಯದ ಹೆಸರನ್ನು ಸಂವಿಧಾನದ ಮೊದಲ ಶೆಡ್ಯೂಲ್ನಲ್ಲಿ ಕೇರಳ ಎಂದು ಬರೆಯಲಾಗಿದೆ. ಸಂವಿಧಾನದ 3 ನೇ ಪರಿಚ್ಛೇದದ ಅಡಿಯಲ್ಲಿ ‘ಕೇರಳಂ’ ಎಂದು ತಿದ್ದುಪಡಿ ಮಾಡಲು ಮತ್ತು ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಸೇರಿಸಲಾದ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಧಾನಸಭೆ ವಿನಂತಿ ಮಾಡುತ್ತಿದೆ ಎಂದು ಪಿಟಿಐ ವರದಿ ಮಾಡಿದೆ.

More articles

Latest article