ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ಪ್ರಕರಣವು, ಸಮಾಜದಲ್ಲಿ ಜಾತಿ ತಾರತಮ್ಯ ಜೀವಂತವಾಗಿದೆ ಎಂಬುದನ್ನು ಬಯಲುಗೊಳಿಸಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದರು
ಶನಿವಾರ ನೂತನವಾಗಿ ನಿರ್ಮಿಸಲಾದ ಬಿ.ಆರ್. ಅಂಬೇಡ್ಕರ್ ಭವನ, ಅನುಭವ ಕೇಂದ್ರ, ಬುದ್ಧ ಹಾಗೂ ಅಂಬೇಡ್ಕರ್ ಅವರ ಪ್ರತಿಮೆಗಳು ಮತ್ತು ಡಿಜಿಟಲ್ ಕಲಿಕಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಮಾತನಾಡಿದ
ಜಿ. ಪರಮೇಶ್ವರ್,
“ಸಮಾಜದ ಶೋಷಿತ ವರ್ಗಗಳ ಜನರು ಶಿಕ್ಷಣ ಪಡೆದು, ಉನ್ನತ ಹುದ್ದೆಗಳನ್ನು ಅಲಂಕರಿಸಿ, ಸಚಿವರೂ ಆಗಿದ್ದಾರೆ. ಆದರೂ, ‘ಮನುವಾದಿ’ ಶಕ್ತಿಗಳ ಮನಸ್ಥಿತಿಯಲ್ಲಿ ಬದಲಾವಣೆಯಾಗಿಲ್ಲ. ಎಂಬುದಕ್ಕೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಅವರಿಗೆ ಸಂಬಂಧಿಸಿದ ಇತ್ತೀಚಿನ ಘಟನೆಯೇ ಸಾಕ್ಷಿ” ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ಮನುವಾದಿಗಳು ಸಮಾಜಕ್ಕೆ ಯಾವ ಸಂದೇಶವನ್ನು ರವಾನಿಸಲು ಬಯಸುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ಬನಾರಸ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ನಂತರವೂ ಇದೇ ರೀತಿಯ ಶುದ್ಧೀಕರಣ ಕಾರ್ಯವನ್ನು ನಡೆಸಲಾಗಿತ್ತು. ಎಂದು ಆಕ್ರೋಶ ವ್ಯಕ್ತಪಡಿಸಿದರು.

