ಲೋಕಸಭೆ ಪ್ರತಿಪಕ್ಷ ನಾಯಕರಿಂದ ಪ್ರತಿಭಟನೆ, ರಾಹುಲ್‌ ಗಾಂಧಿ ಜೊತೆ ಚರ್ಚಿಸಿದ ಕಿರಣ್‌ ರಿಜಿಜು

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ಸಂಸತ್ತಿನ ಉಭಯ ಸದನಗಳ ಪೈಕಿ ಕೆಳಮನೆಯಾದ ಲೋಕಸಭೆಯ ವಿಪಕ್ಷ ನಾಯಕರು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‌ನವದೆಹಲಿಯಲ್ಲಿ ಜು.20 ರಂದು ನಡೆದ ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ, ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ಆದೇಶ ನೀಡಿದ್ದು ಯಾರು, ಅಮಿತ್‌ ಶಾ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಸತತವಾಗಿ ಮತ್ತೊಂದು ದಿನವೂ ಸದನದಲ್ಲಿ ಗದ್ದಲವೆಬ್ಬಿಸಿದ ನಂತರ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಜುಲೈ 20 ರಂದು ಮುಂಗಾರು ಅಧಿವೇಶನ ಆರಂಭವಾದಾಗಿನಿಂದ, ಲೋಕಸಭೆಗೆ ತನ್ನ ‘ಪ್ರಶ್ನೋತ್ತರ ಅವಧಿ’ಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಗದ್ದಲದ ನಡುವೆಯೇ ಚರ್ಚೆಯಿಲ್ಲದೆ ಐದು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ, ಬುಧವಾರ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಸದನ ಸೇರಿದ ತಕ್ಷಣ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದಸ್ಯರಿಗೆ ತಮ್ಮ ಆಸನಗಳಿಗೆ ಮರಳುವಂತೆ ಮತ್ತು ಪ್ರಶ್ನೋತ್ತರ ಅವಧಿಯನ್ನು ನಡೆಸಲು ಅವಕಾಶ ನೀಡುವಂತೆ ಕೋರಿದರು.

“ಸದನದ ಒಳಗಾಗಲಿ ಅಥವಾ ಹೊರಗಾಗಲಿ ಘೋಷಣೆಗಳನ್ನು ಕೂಗುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಫಲಕಗಳನ್ನು ಪ್ರದರ್ಶಿಸುವ ಮತ್ತು ಘೋಷಣೆಗಳನ್ನು ಕೂಗುವ ಮೂಲಕ ನೀವು ಸದನದ ಘನತೆಯನ್ನು ಕುಗ್ಗಿಸುತ್ತಿದ್ದೀರಿ,” ಎಂದು ಬಿರ್ಲಾ ವಿರೋಧ ಪಕ್ಷದ ಸದಸ್ಯರಿಗೆ ಹೇಳಿದರು.

ಪ್ರಮುಖ ಪ್ರಶ್ನೆಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದ್ದರೂ, ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸೃಷ್ಟಿಸುತ್ತಿರುವ ಅಡಚಣೆಯಿಂದಾಗಿ ಸದನಕ್ಕೆ ಪ್ರಶ್ನೋತ್ತರ ಅವಧಿಯನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕ ಸದಸ್ಯರು ತಮ್ಮನ್ನು ಸಂಪರ್ಕಿಸಿ ತಿಳಿಸಿದ್ದಾರೆ ಎಂದು ಬಿರ್ಲಾ ಹೇಳಿದರು.

More articles

Latest article

Most read