ಬೆಂಗಳೂರು: ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 112ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಪ್ರಮುಖರು ಉಪಸ್ಥಿತರಿದ್ದು ಶುಭ ಹಾರೈಸಿದರು.