ಕೆಕೆಆರ್‌ಟಿಸಿಗೆ 400 ಹೊಸ ಬಸ್: ಪ್ರಿಯಾಂಕ್ ಖರ್ಗೆ

ಬೆಂಗಳೂರು, ಆಗಸ್ಟ್ 13: ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 469(iii)ರ ಘೋಷಣೆಯಂತೆ ಕೆಕೆಆರ್‌ಟಿಸಿಗೆ ಹಂಚಿಕೆಯಾಗಿರುವ 400 ಬಸ್‌ಗಳನ್ನು ಖರೀದಿಸಲಾಗುತ್ತಿದೆ. ಪ್ರತಿ ಬಸ್‌ಗೆ ಅಂದಾಜು ₹38 ಲಕ್ಷದಂತೆ ಒಟ್ಟು ₹152 ಕೋಟಿ ವೆಚ್ಚವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾರ್ವಜನಿಕ ಸಾರಿಗೆ ಸೇವೆಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವುದರಿಂದ ಸಾರಿಗೆ ನಿಗಮದ ಮೇಲಿನ ಒತ್ತಡವೂ ಹೆಚ್ಚಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ 400 ಹೊಸ ಬಸ್‌ಗಳ ಖರೀದಿಗೆ ನಿರ್ಧರಿಸಲಾಗಿದೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕೆಕೆಆರ್‌ಡಿಬಿ–ರಾಜ್ಯ ಸರ್ಕಾರದಿಂದ ಅನುದಾನ

400 ಬಸ್‌ಗಳ ಖರೀದಿಗೆ ಅಗತ್ಯವಿರುವ ₹152 ಕೋಟಿ ವೆಚ್ಚದಲ್ಲಿ ಶೇ.50ರಷ್ಟು ಮೊತ್ತವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ಉಳಿದ ಶೇ.50ರಷ್ಟು ಮೊತ್ತವನ್ನು ರಾಜ್ಯ ಸರ್ಕಾರ ಭರಿಸುವ ಉದ್ದೇಶ ಹೊಂದಿದೆ.

ಕೆಕೆಆರ್‌ಡಿಬಿಯಿಂದ ಲಭ್ಯವಾಗುವ ಅನುದಾನ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಂತ ಹಂತವಾಗಿ ಹೊಸ ಬಸ್‌ಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಳೆಯ ಬಸ್‌ಗಳ ಬದಲಾವಣೆ, ಹೊಸ ಮಾರ್ಗಗಳಿಗೆ ಆದ್ಯತೆ

ಹೊಸ ಬಸ್‌ಗಳ ಸೇರ್ಪಡೆಯಿಂದ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಗ್ರಾಮೀಣ ಪ್ರದೇಶಗಳ ಸಾರ್ವಜನಿಕ ಸಾರಿಗೆ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ. ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಹೊಸ ಅನುಸೂಚಿಗಳನ್ನು ಕಾರ್ಯಾಚರಣೆಗೊಳಿಸಲು ಹಾಗೂ ಅಗತ್ಯವಿರುವ ಮಾರ್ಗಗಳಲ್ಲಿ ಸಾರಿಗೆ ಸೇವೆ ವಿಸ್ತರಿಸಲು ಇದು ಸಹಕಾರಿಯಾಗಲಿದೆ.

ಇದರ ಜೊತೆಗೆ ನಿಗಮದ ಹಳೆಯ ಬಸ್‌ಗಳನ್ನು ಹಂತ ಹಂತವಾಗಿ ಬದಲಾಯಿಸಲು ಹಾಗೂ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಉತ್ತಮ ಗುಣಮಟ್ಟದ ಸೇವೆ ಒದಗಿಸಲು ಹೊಸ ಬಸ್‌ಗಳನ್ನು ಬಳಸಿಕೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ, ಸಾರ್ವಜನಿಕರ ಪ್ರಯಾಣದ ಅಗತ್ಯಗಳಿಗೆ ತಕ್ಕಂತೆ ಸಾರಿಗೆ ಸೇವೆಯನ್ನು ಪರಿಣಾಮಕಾರಿಯಾಗಿ ಒದಗಿಸುವುದು ಹೊಸ ಬಸ್‌ಗಳ ಸೇರ್ಪಡೆಯ ಪ್ರಮುಖ ಉದ್ದೇಶವಾಗಿದೆ.

ಕೈಗೆಟುಕುವ ದರದಲ್ಲಿ ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಉತ್ತಮ ಗುಣಮಟ್ಟದ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ಸರ್ಕಾರದ ಉದ್ದೇಶಕ್ಕೆ 400 ಹೊಸ ಬಸ್‌ಗಳ ಸೇರ್ಪಡೆ ಪೂರಕವಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

More articles

Latest article

Most read