ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ: ಸಚಿವ ಕೆ.ಎನ್.ರಾಜಣ್ಣ

Most read

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ ಅರ್ಪಿಸುವ ನಮ್ಮ ಸಂಪ್ರದಾಯಕ್ಕೆ ಪೂರಕವಾಗಿರುವ ವಿಧಿವಿಧಾನಗಳನ್ನು ನಮ್ಮ ಉಪಮುಖ್ಯಮಂತ್ರಿಗಳು ನಿಶ್ಚಯ ಮಾಡಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೆಬ್ಬನಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ಸೆ.,6 ರಂದು ಮುಖ್ಯಮಂತ್ರಿಗಳು ವಿದ್ಯುಕ್ತವಾಗಿ ಎತ್ತಿನಹೊಳೆ ಯೋಜನೆಗೆ ಚಾಲನೆ ಕೊಡ್ತಾರೆ. ಪಶ್ಚಿಮಾಭಿಮುಖವಾಗಿ ಹರಿಯುವ ನೀರನ್ನು ವಿರುದ್ದ ದಿಕ್ಕಿಗೆ ಪೂರ್ವಾಭಿಮುಖವಾಗಿ ನೀರು ಹರಿಸುವ ವಿನೂತನವಾದ ಯೋಜನೆ ಇದು. ಏಳು ವಿಯರ್‌ಗಳನ್ನು ನಿರ್ಮಿಸಲಾಗಿದೆ. ಈಗಾಗಲೇ ನೀರನ್ನು ಕೂಡ ಸಂಗ್ರಹ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲವೆಡೆ ಅರಣ್ಯ ಇಲಾಖೆ ಆಕ್ಷೇಪಗಳಿರುವುದರಿಂದ ಅಡಚಣೆ ಆಗಿದೆ. ಆದ್ದರಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಯುತ್ತಿದೆ. ಮುಂದಿನ ವರ್ಷ ಅರಸೀಕೆರೆ ಸೇರಿದಂತೆ ಏಳು ಜಿಲ್ಲೆಗಳಿಗೂ ನೀರು ಪೂರೈಕೆ ಮಾಡಲಾಗುವುದು. ಉಮಮುಖ್ಯಮಂತ್ರಿಗಳು ಎಲ್ಲಾ ಅಡಚಣೆಗಳನ್ನು ನಿವಾರಣೆ ಮಾಡಿದ್ದಾರೆ . ಉಪಮುಖ್ಯಮಂತ್ರಿಗಳು ವೈಯುಕ್ತಿಕ ಆಸಕ್ತಿ ವಹಿಸಿ ಈ ಯೋಜನೆಯನ್ನು ಈ ಹಂತಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲೆಯ ಜನರ ಪರವಾಗಿ ಅಭಿನಂದನೆ ಅವರಿಗೆ ಸಲ್ಲಿಸುತ್ತೇನೆ. ಕಾರ್ಯಕ್ರಮಕ್ಕೆ ಏಳು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೇವೆ. ಈ ಯೋಜನೆಯಿಂದ ನೀರಿನ ಅಗತ್ಯತೆ ಇರುವ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಉಳಿದ ಕಾಮಗಾರಿಗಳನ್ನು ಅತಿ ತುರ್ತಾಗಿ ಮಾಡಿ ಮುಂದಿನ ವರ್ಷ ಏಳು ಜಿಲ್ಲೆಯ ಕೆರೆಗಳಿಗೆ ನೀರು ಹರಿಸುತ್ತೇವೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ಜವಾಬ್ದಾರಿ ವಹಿಸಿ ಕೆಲಸ ಮಾಡಿದ್ದಾರೆ. ಗುತ್ತಿಗೆದಾರ ಕೂಡ ಕಷ್ಟದ ಪರಿಸ್ಥಿತಿಯಲ್ಲಿ ಯೋಜನೆ ಕಾಮಗಾರಿ ಮಾಡುತ್ತಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಯೋಜನೆಗೆ ದುಡಿದ ಎಲ್ಲರನ್ನೂ ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

More articles

Latest article