ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ(KOCHIMUL) ನೇಮಕಾತಿಗೆ ಶಿಫಾರಸು ಪತ್ರ ಕೊಟ್ಟವರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ.
ಮೊನ್ನೆ ಮೊನ್ನೆಯಷ್ಟೇ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿ ಆರೋಪ ಪಟ್ಟಿ ಬಿಡುಗಡೆ ಮಾಡಿತ್ತು. ಅದರಲ್ಲಿ 30ಕ್ಕೂ ಹೆಚ್ಚು ಸಚಿವರು, ಶಾಸಕರ ನೇಮಕಾತಿಗೆ ಹೆಸರನ್ನು ಶಿಫಾರಸು ಮಾಡಿರುವ ಪತ್ರ ಪತ್ತೆಯಾಗಿದೆ ಎಂದು ಇಡಿ ಅಧಿಕೃತವಾಗಿ ತಿಳಿಸಿತ್ತು.
ಶಿಫಾರಸ್ಸು ಮಾಡಿ ನೇಮಕಾತಿಯಾದ 10 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ.
ಪ್ರತಿಯೊಬ್ಬ ಅಭ್ಯರ್ಥಿಗಳ ಬಳಿ 20 ರಿಂದ 30 ಲಕ್ಷ ರೂ. ಹಣವನ್ನು ಪಡೆಯಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಯ್ಕೆಯಾದ ಎಲ್ಲರಿಗೂ ಇಡಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.