ಕೊಡಗು ಯೋಧ ದಿವಿನ್ ಅವರ ಸ್ಥಿತಿ ಗಂಭೀರ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ ಪಿ.ಪಿ.ದಿವಿನ್ ಅವರ ಸ್ಥಿತಿ ಗಂಭೀರವಾಗಿದೆ. ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ.

ದಿವಿನ್ ಪೋಷಕರು ಪುತ್ರನನ್ನು ನೋಡಲು ಜಮ್ಮವಿನ ಉದಮ್‌ಪುರಕ್ಕೆ ತೆರಳಿದ್ದಾರೆ. ಗ್ರಾಮದ ಪಳಂಗೋಟು ಪ್ರಕಾಶ್ ಮತ್ತು ಜಯ ದಂಪತಿಯ ಏಕೈಕ ಪುತ್ರ ದಿವಿನ್.‌ ಇವರು 10 ವರ್ಷಗಳ ಹಿಂದೆ ಭೂ ಸೇನೆಗೆ ಸೇರಿದ್ದರು. ದಿವಿನ್‌ ಅವರಿಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಯುವತಿಯೊಂದಿಗೆವಿವಾಹ ನಿಶ್ಚಯವಾಗಿದ್ದು, ಫೆಬ್ರವರಿಯಲ್ಲಿ ಮದುವೆ ನಡೆಯಲಿದೆ.

ಅಲ್ಲಿನ ವೈದ್ಯರ ಜೊತೆ ಮಡಿಕೇರಿ ಶಾಸಕ‌ ಮಂಥರ್ ಗೌಡ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಿ ಮಾಹಿತಿ ಪಡೆದಿದ್ದಾರೆ.

More articles

Latest article

Most read