ಕೋಲಾರದಿಂದ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕೆವೈ ನಂಜೇಗೌಡ ಹಾಗೂ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಆದರೆ ಇನ್ನು ಅಳಿಯ ಚಿಕ್ಕಪೆದ್ದಣ್ಣಗೆ (Chikka Peddanna) ಟಿಕೆಟ್ ನೀಡುವಂತೆ ಸಚಿವ ಕೆ.ಎಚ್ ಮುನಿಯಪ್ಪ ಪಟ್ಟು ಹಿಡಿದಿದ್ದಾರೆ.
ಬಹುತೇಕ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಸಚಿವ ಡಾ ಎಂ.ಸಿ ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹಮದ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಕೆವೈ ನಂಜೇಗೌಡ ಅವರು ಖಾಸಗಿ ವಾಹಿನಿಗೆ ಮಾತನಾಡಿದ್ದು, ಕೆ.ಹೆಚ್ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುವುದಾಗಿ ಕನ್ನಡದ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು, ಕೆ.ಹೆಚ್.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್ ರಾಜೀನಾಮೆ ನೀಡುತ್ತೇವೆ ಎಂದು ಹೇಳಿದ್ದಾರೆ.
12 ಗಂಟೆಗೆ ಸುಮಾರಿಗೆ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದರು.