‌ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಸಮುದಾಯಗಳನ್ನು ಎಸ್‌ ಸಿ ಪಟ್ಟಿಗೆ ಸೇರಿಸಲು ಬದ್ಧ: ಪ್ರಿಯಾಂಕ್‌ ಖರ್ಗೆ

Most read

ಬೆಂಗಳೂರು: ‌ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದ್ದಾರೆ.

ಕೋಲಿ-ಕಬ್ಬಲಿಗ ಸಮುದಾಯದ ಮುಖಂಡರು ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿಕೋಂಡರು. ಈ ಸಮಾಜಗಳ ಮತ್ತು ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸಿದ ನಂತರ ಮಾತನಾಡಿದ ಸಚಿವ ಪ್ರಿಯಾಂಕ್‌, ಕೇಂದ್ರ ಸರ್ಕಾರ ಪ್ರಸ್ತಾವವನ್ನು ಹಿಂದಕ್ಕೆ ಕಳುಹಿಸಿದೆ. ಈ ಕಾರಣಗಳನ್ನು ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸುವ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕೋಲಿ ಮತ್ತು ಇತರೆ ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಎದುರಾಗಿರುವ ತಾಂತ್ರಿಕ ತೊಡಕುಗಳನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸೂಕ್ತ ಮಾಹಿತಿ ಕ್ರೋಡೀಕರಿಸಿದ ಬಳಿಕ ಕೋಲಿ-ಕಬ್ಬಲಿಗ ಜನಾಂಗದ ಮುಖಂಡರ ಜೊತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಲಾಗುವುದು ಎಂದೂ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಕಲಬುರಗಿ ಜಿಲ್ಲೆಯ ಶಾಸಕರಾದ ಅಲ್ಲಮಪ್ರಭು ಪಾಟೀಲ, ಖನೀಜ್ ಫಾತಿಮಾ, ಎಂ.ವೈ. ಪಾಟೀಲ, ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮತ್ತು ಕೋಲಿ ಸಮಾಜದ ಮುಖಂಡರು ಸಭೆಯಲ್ಲಿದ್ದರು.

More articles

Latest article