ಕೊಳ್ಳೆಗಾಲ: ಭೀಕರ ಅಪಘಾತಕ್ಕೆ ಐವರು ಬಲಿ

Most read

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ  ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದು, ಎಲ್ಲರೂ ಮಂಡ್ಯ ಜಿಲ್ಲೆಯವರು ಎಂದು ಪೊಲೀಸರು ಹೇಳಿದ್ದಾರೆ.

ಟಿಪ್ಪರ್​ ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಪಕ್ಕಕ್ಕೆ ಉರುಳಿಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತರು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಹೋಗುತ್ತಿದ್ದರು.

More articles

Latest article