ಕೋಟಾ: ನೀಟ್‌ ಆಕಾಂಕ್ಷಿ ಆತ್ಮಹತ್ಯೆ: ಇದು ಈ ವರ್ಷದ 15ನೇ ಪ್ರಕರಣ

ಕೋಟಾ(ರಾಜಸ್ತಾನ): ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಆಕಾಂಕ್ಷಿಯಾಗಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬರು ಇಲ್ಲಿನ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಶರಣಾದ ವಿದ್ಯಾರ್ಥಿನಿ ಜೀಶನ್‌ ಜಮ್ಮು ಮತ್ತು ಕಾಶ್ಮೀರದ ನಿವಾಸಿಯಾಗಿದ್ದು, ಕೋಟಾದ ಕೋಚಿಂಗ್ ಸಂಸ್ಥೆಯೊಂದರಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದರು. ಇಲ್ಲಿನ ಪ್ರತಾಪ್ ಚೌರಾಹಾದಲ್ಲಿರುವ ಪಿಜಿಯೊಂದರಲ್ಲಿ ಉಳಿದುಕೊಂಡಿದ್ದರು.

ಆತ್ಮಹತ್ಯೆಗೆ ಶರಣಾಗುವುದಕ್ಕೂ ಮೊದಲು ತನ್ನ ಸಂಬಂಧಿ ಬುರ್ಹಾನ್ ಎಂಬುವವರಿಗೆ ಕರೆ ಮಾಡಿದ್ದ ಜೀಶನ್‌, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು ಎಂದು ಮಹಾವೀರ್ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ರಮೇಶ್ ಕಾವ್ಯಾ ತಿಳಿಸಿದ್ದಾರೆ.

ಬುರ್ಹಾನ್‌ ಅವರು ಅದೇ ಪಿಜಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಮಮತಾಗೆ ಕರೆ ಮಾಡಿ ಜೀಶನ್ ಕೋಣೆಗೆ ತೆರಳುವಂತೆ ಹೇಳಿದ್ದಾರೆ. ಮಮತಾ ಅವರು ಜೀಶನ್‌ ಕೋಣೆಗೆ ಹೋದಾಗ ಒಳಗಿನಿಂದ ಚಿಲಕ ಹಾಕಿರುವುದನ್ನು ಗಮನಿಸಿದ್ದಾರೆ. ತಕ್ಷಣ ಸಹಾಯಕ್ಕಾಗಿ ಕೂಗಿದ್ದಾರೆ. ಆ ವೇಳೆಗಾಗಲೇ ಜೀಶನ್‌ ನೇಣು ಹಾಕಿಕೊಂಡಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ.

ಕೋಟಾದಲ್ಲಿ ಈ ವರ್ಷದ ಜನವರಿಯಿಂದ ಈವರೆಗೆ 15 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ತಿಂಗಳಲ್ಲಿ ಇದು ಎರಡನೇ ಪ್ರಕರಣವಾಗಿದ್ದು, ಮೇ 3ರಂದು ಮಧ್ಯಪ್ರದೇಶದಿಂದ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದರು.

More articles

Latest article

Most read