Saturday, May 18, 2024

KAS Recruitment 2024| ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ

Most read

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್‌ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್‌ “ಎ” ಮತ್ತು ಗ್ರೂಪ್‌ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್‌ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸುಮಾರು ಆರು ವರ್ಷಗಳ ನಂತರ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

2024ರ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಏಪ್ರಿಲ್‌ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸದ್ಯ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು (ತಾತ್ಕಾಲಿಕ) ಪ್ರಕಟ ಮಾಡಲಾಗಿದ್ದು, 2024ರ ಮೇ 5ರಂದು ಪರೀಕ್ಷೆ ನಡೆಯಲಿದೆ. ಹೌದು,ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ಕಾಲಕಾಲಕ್ಕೆ ತಿದ್ದುಪಡಿಯಾದ ನಿಯಮಗಳಡಿಯಲ್ಲಿ ಗೆಜೆಟೆಡ್ ಪ್ರೊಬೇಷನರ್ 2023-24ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಕೆಎಎಸ್‌ ಗೆಜೆಟೆಡ್‌ ಪ್ರೊಬೇಷನರ್ (ಗ್ರೂಪ್‌ ಎ) ಖಾಲಿ ಹುದ್ದೆಗಳು

ಇಲಾಖೆಯ ಹೆಸರುಉಳಿದ ಪೋಷಕ ವರ್ಗ ವೃಂದ    ಹೈದ್ರಾಬಾದ್ ಕರ್ನಾಟಕ ವೃಂದಒಟ್ಟು ಹುದ್ದೆ
ಸಹಾಯಕ ಆಯುಕ್ತರು (ಕಿರಿಯ ಶ್ರೇಣಿ) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ370340
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು ವಾಣಿಜ್ಯ ತೆರಿಗೆ ಇಲಾಖೆ301141
ಸಹಾಯಕ ನಿರ್ದೇಶಕರು ಖಜಾನೆ ಇಲಾಖೆ010102
ಕಾರ್ಯನಿರ್ವಾಹಕ ಅಧಿಕಾರಿ ಸಹಾಯಕ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ32840
ಡಿ.ವೈ.ಎಸ್.ಪಿ. ಒಳಾಡಳಿತ ಇಲಾಖೆ070209
ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ140620
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ/ ಸಹಾಯಕ ನಿರ್ದೇಶಕರು/ಪ್ರಾಂಶುಪಾಲರು (ಪಿಇಟಿಸಿ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ050207
ಒಟ್ಟು12336159

ಕೆಎಎಸ್‌ ಗೆಜೆಟೆಡ್‌ ಪ್ರೊಬೇಷನರ್ (ಗ್ರೂಪ್‌ ಬಿ ) ಖಾಲಿ ಹುದ್ದೆಗಳು

ಇಲಾಖೆಯ ಹೆಸರುಉಳಿದ ಪೋಷಕ ವರ್ಗ ವೃಂದ    ಹೈದ್ರಾಬಾದ್ ಕರ್ನಾಟಕ ವೃಂದಒಟ್ಟು ಹುದ್ದೆ
ತಹಶೀಲ್ದಾರ್ (ಗ್ರೇಡ್-2) ಕಂದಾಯ ಇಲಾಖೆ371451
ವಾಣಿಜ್ಯ ತೆರಿಗೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ491059
ಕಾರ್ಮಿಕ ಅಧಿಕಾರಿ, ಕಾರ್ಮಿಕ ಇಲಾಖೆ030104
ಸಹಾಯಕ ಅಧೀಕ್ಷಕರು, ಒಳಾಡಳಿತ ಇಲಾಖೆ (ಕಾರಾಗೃಹ)020103
ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಹಕಾರ ಇಲಾಖೆ12 12
ಸಹಾಯಕ ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ0909
ಅಬಕಾರಿ ಉಪ ಅಧೀಕ್ಷಕರು, ಆರ್ಥಿಕ ಇಲಾಖೆ (ಅಬಕಾರಿ)080210
ಉದ್ಯೋಗಾಧಿಕಾರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ020103
ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ0404
ಮುಖ್ಯಾಧಿಕಾರಿ (ಗ್ರೇಡ್-1), ನಗರಾಭಿವೃದ್ಧಿ ಇಲಾಖೆ0101
ಸಹಾಯಕ ಖಜಾನಾಧಿಕಾರಿ, ಆರ್ಥಿಕ ಇಲಾಖೆ, (ಖಜಾನೆ)380846
ಸಹಾಯಕ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 0909
ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ010102
ಶಾಖಾಧಿಕಾರಿ, ಕರ್ನಾಟಕ ಸರ್ಕಾರದ ಸಚಿವಾಲಯ040105
ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ060107
ಒಟ್ಟು18441225

ಶೈಕ್ಷಣಿಕ ವಿದ್ಯಾರ್ಹತೆ:-

ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು.

‘ಪರಂತು, ಅಭ್ಯರ್ಥಿಗಳು ಯಾವುದಾದರೂ ಪರೀಕ್ಷೆಗೆ ಹಾಜರಾಗಿದ್ದು, ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಶೈಕ್ಷಣಿಕವಾಗಿ ಅರ್ಹರಾಗುವುದಾದಲ್ಲಿ, ಆದರೆ ಆ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳದೇ ಇದ್ದಲ್ಲಿ, ಅಂತಹ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ.

ವಯೋಮಿತಿ:-

ಸರ್ಕಾರದ ಆದೇಶ ದಿನಾಂಕ 24/01/2024ರಂತೆ ಕರ್ನಾಟಕ ಗೆಜೆಟೆಡ್ ಪ್ರೋಬೆಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ) ನಿಯಮಗಳು, 1997 ರನ್ವಯ 2023-24ನೇ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ರಿಕ್ತ ಸ್ಥಾನಗಳಿಗೆ ಹೊಸದಾಗಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ ಎಲ್ಲಾ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿ (One time Measure) ಗರಿಷ್ಠ ವಯೋಮಿತಿಯನ್ನು (Upper age limit) ಮೂರು ವರ್ಷಗಳಿಗೆ ಹೆಚ್ಚಿಸಿ ಸರ್ಕಾರವು ಆದೇಶಿಸಿದೆ.

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷಗಳು
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳು

ಅರ್ಜಿ ಶುಲ್ಕ:-

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ರೂ 600/-

ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ – ರೂ. 300/-

ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 50/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಶುಲ್ಕ ಪಾವತಿಯಿಂದ ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ಇದೆ.

ಪರೀಕ್ಷಾ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು UPI ಮೂಲಕ ಪಾವತಿಸಬಹುದಾಗಿದೆ.

ಆಯ್ಕೆ ವಿಧಾನ:-

ಪೂರ್ವಭಾವಿ ಪರೀಕ್ಷೆ ಬಳಿಕ ಮುಖ್ಯ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ.

ಮುಖ್ಯವಾದ ದಿನಾಂಕಗಳು :- 

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-04-2024  
ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ)    05-05-2024

ಪ್ರಮುಖ ಲಿಂಕುಗಳು:-

ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಲಿಂಕ್  ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ವಿಧಾನ: –

ಪ್ರಾಧಿಕಾರದ ವೆಬ್‌ ಸೈಟ್  https://kpsc.kar.nic.in/ ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.

ಸಮಸ್ಯೆಯಾದರೆ ಈ ಸಹಾಯವಾಣಿಗೆ ಕರೆ ಮಾಡಿ

ಅರ್ಜಿ ಸಲ್ಲಿಸಲು ಸಮಸ್ಯೆಗಳು ಎದುರಾದಲ್ಲಿ ಹೆಲ್ಪ್‌ಲೈನ್‌ ನಂಬರ್‌ ನೀಡಲಾಗಿದ್ದು, 080-30574957 / 30574901 ಗೆ ಕರೆ ಮಾಡಲು ಸೂಚಿಸಲಾಗಿದೆ.

ತಪ್ಪು ಸರಿಪಡಿಸಲು ಕೊನೇ ಅವಕಾಶ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವಿಳಾಸ, ಪ್ರವರ್ಗ, ತಂದೆ-ತಾಯಿ ಹೆಸರು, ವಿದ್ಯಾರ್ಹತೆ ಮುಂತಾದ ವಿಷಯಗಳನ್ನು ತಪ್ಪಾಗಿ ನಮೂದಿಸಿರುವುದಾಗಿ 302 ಸದರಿ ಮಾಹಿತಿಗಳನ್ನು ಬದಲಾವಣೆ ಮಾಡುವಂತೆ ಮನವಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗಕ್ಕೆ ಒಂದು ಬಾರಿ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಸದರಿ ಅರ್ಜಿಯಲ್ಲಿನ ಮಾಹಿತಿಗಳನ್ನು ಆಯೋಗದ ಅಧಿಕಾರಿ/ಸಿಬ್ಬಂದಿಗೆ ತಂತ್ರಾಂಶದಲ್ಲಿ ಬದಲಾವಣೆ ಮಾಡಲು ಸಾಧ್ಯವಿರದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳೇ ನೇರವಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಮಾಹಿತಿಗಳನ್ನು ಸರಿಪಡಿಸಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂಬಂಧ ತದನಂತರ ಸಲ್ಲಿಸಲಾಗುವ ಯಾವುದೇ ಕೋರಿಕೆ/ಮನವಿಗಳನ್ನು ಆಯೋಗದಿಂದ ಪುರಸ್ಕರಿಸಲಾಗುವುದಿಲ್ಲ.

Exam Name KAS 2024
Organization KPSC
Notification ReleaseExpected in February or March 2024
VacanciesTotal 276 (Group A: 105, Group B: 171) (Anticipated)
Eligibility CriteriaBachelor’s Degree from a UGC recognized University; Age: 21-35 years, with 5 years relaxation for reserved candidates
Application FeeOpen Category: ₹600, 2(A), 2(B), 3(A), 3(B): ₹300, Ex-servicemen: ₹50
Selection Process Prelims, Mains, and Interview 
Official Website https://kpsc.kar.nic.in/

ಜಾಗ್ರತೆಯಿಂದ ಅರ್ಜಿ ಸಲ್ಲಿಸಿ:-

(1) ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು.

(2) ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು.

(3) ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ಇತರೆ ಪ್ರಮಾಣ ಪತ್ರಗಳನ್ನು ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧ-2ರಲ್ಲಿ ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ತಮ್ಮ ಹೆಸರಿನಲ್ಲಿಯೇ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್‌ ಲೋಡ್ ಮಾಡತಕ್ಕದ್ದು, (ದಾಖಲೆಗಳು ಸ್ಪಷ್ಟವಾಗಿರಬೇಕು) ತಪ್ಪಿದ್ದಲ್ಲಿ ಅವರ ಮೀಸಲಾತಿ/ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುವುದು.

(4)  ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.

 ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ಸಹಿ /ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ /UPI ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ ಭಾವಚಿತ್ರ/ ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ವಿಶೇಷ ಸೂಚನೆ: ಸದರಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳನ್ನು ಅವಶ್ಯಕ ಸಂದರ್ಭಗಳಲ್ಲಿ ಆಯೋಗವು ಪರಿಶೀಲನೆಗೆ ಒಳಪಡಿಸಬಹುದಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಜಾಗರೂಕತೆಯಿಂದ ತಮಗೆ ಅನ್ವಯಿಸುವ ಎಲ್ಲಾ ದಾಖಲೆಗಳನ್ನು ಸ್ಪಷ್ಟವಾಗಿ ಗೋಚರಿಸುವ ರೀತಿಯಲ್ಲಿ ಅಪ್‌ಲೋಡ್ ಮಾಡತಕ್ಕದ್ದು. ಮೂಲ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಈಗಾಗಲೇ ಆನ್‌ಲೈನ್ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಿರುವ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು.

More articles

Latest article