ಕೆಪಿಎಸ್ಸಿ ನೇಮಕಾತಿ ಅಕ್ರಮ : ಬಸವರಾಜ ಕನ್ನಾಳೆ ಮನೆ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

ಬೆಂಗಳೂರು : ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ  ಅಕ್ರಮ ಎಸಗಿರೋ ಆರೋಪದ ಮೇಲೆ ಬಂಧನವಾಗಿರುವ ಆರೋಪಿ ಬಸವರಾಜ್ ಕನ್ನಾಳೆ  ಮನೆಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ 6 ಮಂದಿ ಅಭ್ಯರ್ಥಿಗಳು ಹಣ ನೀಡಿರುವುದಾಗಿ ಸಿಐಡಿ ಮುಂದೆ ಒಪ್ಪಿಕೊಂಡಿದ್ದಾರೆ. ಅಕ್ರಮ ಜಾಲದಲ್ಲಿ ಮಧ್ಯವರ್ತಿ ಬಸವರಾಜ್ ಕನ್ನಾಳೆ ಸೇರಿದಂತೆ ಹಲವು ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಅಭ್ಯರ್ಥಿಗಳು ಸಿಐಡಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಯಾರಿಗೆ ಎಷ್ಟು ಹಣ ನೀಡಲಾಗಿದೆ. ಯಾವ ತರಹದ ವ್ಯವಹಾರ ನಡೆದಿದೆ,  ಎಲ್ಲೆಲ್ಲಿ ನಡೆದಿದೆ ಎಂಬ ಸ್ಪೋಟಕ ವಿವರಗಳು ಲಭ್ಯವಾಗಿದ್ದು, ಸಿಐಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು  ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ಕಚೇರಿಯಲ್ಲಿ ಒಂದು ಹುದ್ದೆಗೆ ಬರೋಬ್ಬರಿ 40 ಲಕ್ಷ ರೂಪಾಯಿಗೆ ಲಂಚ ಪಡೆದ್ದರು ಎನ್ನಲಾಗಿದೆ.  ಮುಂಗಡವಾಗಿ 20 ಲಕ್ಷ ರೂ. ಹಣ ಪಾವತಿಸಲಾಗಿತ್ತು ಎಂದು ಅಭ್ಯರ್ಥಿ ಸುಹೇಲ್ ಎಂಬುವನು ತಿಳಿಸಿದ್ದಾನೆ. 
ಪರೀಕ್ಷೆಗೂ ಮುಂಚೆಯೇ ಅಭ್ಯರ್ಥಿಗಳ ಕೈಗೆ ಪ್ರಶ್ನೆಪತ್ರಿಕೆ ತಲುಪಿತ್ತು. ಅಭ್ಯರ್ಥಿಗಳು ಸಾಮಾನ್ಯ ಪರೀಕ್ಷಾ ಕೇಂದ್ರಗಳ ಬದಲಾಗಿ ಬೆಂಗಳೂರಿನ ರೆಸಾರ್ಟ್‌, ತುಮಕೂರಿನ ದೇವರಾಯನದುರ್ಗ ಹಾಗೂ ಆಂಧ್ರಪ್ರದೇಶದ ರೆಸಾರ್ಟ್‌ಗಳಲ್ಲಿ ಕುಳಿತು ಪರೀಕ್ಷೆ ಬರೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.  

ಕನ್ನಾಳೆ ಮನೆ ವಶಕ್ಕೆ
ಬಾಲ್ಕಿ ಮೂಲದ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆಯ ಸಂಜಯ್ ನಗರದ ವಿನಾಯಕ ಲೇಔಟ್ ನಲ್ಲಿರುವ ಮನೆಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.  ಮನೆಯಲ್ಲಿನ ಸಿಸಿಟಿವಿ, ಡಿವಿಆರ್‌ ವಶಕ್ಕೆ ಪಡಿಸಿಕೊಂಡಿದ್ದಾರೆ.
ಜ್ಞಾನೇಂದ್ರ ಕುಮಾರ್‌ ಹಾಗೂ ಬಸವರಾಜ್‌ ಕನ್ನಾಳೆ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ಅಕ್ರಮ ಎಸಗಲು ಇಬ್ಬರು ಒಟ್ಟಿಗೆ ಪ್ಲ್ಯಾನ್‌ ಮಾಡಿಕೊಂಡಿದ್ದರು ಎನ್ನಲಾಗಿದೆ. 

More articles

Latest article

Most read