KPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು

ಬೆಂಗಳೂರು ಸೆ. 4: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸೆಪ್ಟೆಂಬರ್ 3ರಂದು ಸರ್ಕಾರ ಅಮಾನತು ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಅಮಾನತು ಜಾರಿಯಲ್ಲಿರಲಿದೆ.

2016ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ IAS ಅಧಿಕಾರಿಯಾಗಿರುವ ಜ್ಞಾನೇಂದ್ರ ಕುಮಾರ್, 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

KPSC ಮೂಲಕ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ CID ತನಿಖೆ ನಡೆಸುತ್ತಿದೆ. ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಅಭ್ಯರ್ಥಿಗಳಿಗೆ ಅಕ್ರಮವಾಗಿ ನೆರವು ನೀಡಿರುವುದು ಹಾಗೂ OMR ಉತ್ತರ ಪತ್ರಿಕೆಗಳಲ್ಲಿ ಅಕ್ರಮವಾಗಿ ಬದಲಾವಣೆ ಮಾಡಿರುವ ಆರೋಪಗಳು ತನಿಖೆಯ ವ್ಯಾಪ್ತಿಯಲ್ಲಿವೆ.

ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರನ್ನು CID ಎರಡು ದಿನಗಳ ಕಾಲ ಸುದೀರ್ಘವಾಗಿ ವಿಚಾರಣೆ ನಡೆಸಿದ ಬಳಿಕ ಬಂಧಿಸಿತ್ತು. ಬಳಿಕ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಪ್ರಕರಣದ ಆರ್ಥಿಕ ಆಯಾಮವನ್ನೂ ಜಾರಿ ನಿರ್ದೇಶನಾಲಯ (ED) ಪ್ರತ್ಯೇಕವಾಗಿ ಪರಿಶೀಲಿಸುತ್ತಿದೆ. KPSCಯ ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳು ಹಾಗೂ ಇತರರ ಪಾತ್ರದ ಬಗ್ಗೆಯೂ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.

ಜ್ಞಾನೇಂದ್ರ ಕುಮಾರ್ ಅವರನ್ನು ಅಮಾನತುಗೊಳಿಸುವ ವೇಳೆ, ಅಖಿಲ ಭಾರತ ಸೇವೆಗಳ ಶಿಸ್ತು ಮತ್ತು ಮೇಲ್ಮನವಿ ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿದೆ. ಅಮಾನತು ಅವಧಿಯಲ್ಲಿ ನಿಯಮಾನುಸಾರ ಜೀವನಾಧಾರ ಭತ್ಯೆ ನೀಡಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

More articles

Latest article

Most read