ಕೆಪಿಟಿಸಿಎಲ್‌ನಲ್ಲಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಕೊನೆ ದಿನ ನವೆಂಬರ್‌ 20

Most read

ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (KPTCL) ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.


2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅಕ್ಟೋಬರ್ 21 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್‌ 20 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಕೆಪಿಟಿಸಿಎಲ್‌ ತಿಳಿಸಿದೆ.


ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಹಾಗೂ ಇತರೆ ವಿವರಗಳನ್ನು ಒಳಗೊಂಡ ಉದ್ಯೋಗ ಪ್ರಕಟಣೆಯನ್ನು ನಿಗಮದ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗಿದೆ.

ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ಹೇಗೆ?
ಒಟ್ಟು ಹುದ್ದೆಗಳು 2975. ಇದರಲ್ಲಿ 433 ಕಿರಿಯ ಸ್ಟೇಶನ್ ಅಟೆಂಡಂಟ್ ಹಾಗೂ 2542 ಕಿರಿಯ ಪವರ್‌ಮ್ಯಾನ್ ಹುದ್ದೆಗಳು.


10 ಮತ್ತು 12ನೇ ತರಗತಿ ಪಾಸಾಗಿರಬೇಕು. ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು.


ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.

ಎಸ್‌ಸಿ/ಎಸ್‌ಟಿ/ಕ್ಯಾಟಗರಿ-I ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಹಾಗೂ ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.


ವಿಶೇಷಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ರೂ. 378 ಶುಲ್ಕ, ಸಾಮಾನ್ಯ/ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: ರೂ. 614 ಶುಲ್ಕ ಪಾವತಿಸಬೇಕಾಗುತ್ತದೆ.

ಕನ್ನಡ ಭಾಷಾ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?
ಕೆಪಿಟಿಸಿಎಲ್‌ ವೆಬ್‌ಸೈಟ್‌ ಇಲ್ಲವೇ ಕರ್ನಾಟಕದ ವಿದ್ಯುತ್‌ ವಿತರಣಾ ಸಂಸ್ಥೆಗಳಾದ ಬೆಸ್ಕಾಂ, ಸೆಸ್ಕ್‌, ಜೆಸ್ಕಾಂ, ಹೆಸ್ಕಾಂ, ಮೆಸ್ಕಾಂ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ವೆಬ್‌ಸೈಟ್‌ ವಿವರ ಹೀಗಿದೆ:

https://kptcl.karnataka.gov.in

https://bescom .karnataka.gov.in

https://cescmysore.karnataka.gov.in

https://hescom.karnataka.gov.in

https://mecom.karnataka.gov.in

https://gescom.karnataka.gov.in

More articles

Latest article