ನಾಳೆ ಸೋಮನಹಳ್ಳಿಯಲ್ಲಿ ಕೃಷ್ಣ ಅಂತ್ಯಕ್ರಿಯೆ; ಕೆಂಗೇರಿ, ಚನ್ನಪಟ್ಟಣ, ರಾಮನಗರ, ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

Most read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅವರ ಪಾರ್ಥಿವ ಶರೀರವನ್ನು ನಾಳೆ ಕೊಂಡೊಯ್ಯಲಾಗುತ್ತಿದೆ.. ನಾಳೆ ಬೆಳಗ್ಗೆ 8 ಗಂಟೆಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಪ್ರಯಾಣ ಮಾಡಲಿದ್ದು, ಕೆಂಗೇರಿ, ಚನ್ನಪಟ್ಟಣ, ರಾಮನಗರ, ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಕೆಲ ಸಮಯ ಅವಕಾಶ ಕಲ್ಪಿಸಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೂ ಅಂತಿಮ ದರ್ಶನ ಪಡೆದಿದ್ದಾರೆ.

ಎಸ್.ಎಂ. ಕೃಷ್ಣ ಅವರ ಅಂತಿಮ ದರ್ಶನ ಪಡೆಯಲು ಅವರ ಮನೆಗೆ ಜನಸಾಗರವೇ ಹರಿದು ಬರುತ್ತಿದೆ. ಅನೇಕ ಸಚಿವರು, ಶಾಸಕರು, ಮಾಜಿ ಸಚಿವರು, ಶಾಸಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಚಿತ್ರರಂಗದ ನಟ ನಟಿಯರು, ನಿರ್ಮಾಪಕ, ನಿರ್ದೇಶಕರು ಆಗಮಿಸುತ್ತಿದ್ದಾರೆ. ಎಸ್.ಎಂ ಕೃಷ್ಣ ನನ್ನ ರಾಜಕೀಯ ಗುರು. ಅವರು ನನ್ನನ್ನು ಸಹೋದರಿ ಅಂತಲೇ ಕರೆಯುತ್ತಿದ್ದರು. ನಾನು ಬೆಂಗಳೂರಿನಲ್ಲಿ ಮನೆ ಕಟ್ಟಲು ಅವರೇ ಕಾರಣ. ಹೀಗಾಗಿ ಮನೆಗೆ ಕೃಷ್ಣಾಶ್ರಯ ಎಂದೇ ಹೆಸರಿಟ್ಟಿದ್ದೇನೆ. ಸ್ತ್ರೀಶಕ್ತಿ ಸಂಘಗಳ ಬೆಳವಣಿಗೆಗೆ ಅವರೇ ಕಾರಣ. ಕೃಷ್ಣ ಅವರದ್ದು ಸುವರ್ಣ ಕಾಲ ಎಂದು ಅವರನ್ನು ನೆನೆದು ಮಾಜಿ ಸಚಿವೆ ಮೋಟಮ್ಮ ಕಣ್ಣೀರು ಹಾಕಿದ್ದಾರೆ.
ಸಚಿವರಾದ ಚೆಲುವರಾಯಸ್ವಾಮಿ, ಸಾರಾ ಗೋವಿಂದು, ಎಸ್.ಚಿನ್ನೇಗೌಡ ಅನಿಲ್ ಕುಂಬ್ಳೆ, ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.

More articles

Latest article